ಇತ್ತೀಚಿನ ಸುದ್ದಿ
ಕಲಬುರಗಿ ಜಿಲ್ಲೆಯಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಪ್ರಾರಂಭಿಸಲಾಗುವುದು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್
17/03/2025, 21:42

ಬೆಂಗಳೂರು (reporterkarnataka.com): ಕಲಬುರಗಿ ಜಿಲ್ಲೆಯ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಯನ್ನು ಪ್ರಾರಂಭಿಸಲು ಸರ್ಕಾರ ಉದ್ದೇಶಿಸಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ ಸಹ ಘೋಷಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಆರ್ ಪಾಟೀಲ್ ಹೇಳಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ತಲಾ 100 ಕೋಟಿ ರೂ ವೆಚ್ಚದಲ್ಲಿ ಅಗತ್ಯ ಮಾನವ ಸಂಪನ್ಮೂಲ ಹಾಗೂ ಸುಸಜ್ಜಿತ ಸೌಲಭ್ಯಗಳೊಂದಿಗೆ ಸ್ಥಾಪಿಸಲಾಗುವುದು ಎಂದು ತಿಳಿಸಿದರು.