12:48 AM Tuesday18 - March 2025
ಬ್ರೇಕಿಂಗ್ ನ್ಯೂಸ್
Farmers Loan | ಅರ್ಹತೆ ಇರುವ ರೈತ ಫಲಾನುಭಗಳಿಗೆ ಸಾಲ ಸೌಲಭ್ಯ: ವಿಧಾನ… ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕ… Water Dispute | ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ… ಯುವನಿಧಿ ಯೋಜನೆ; ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಚಾರಕ್ಕೆ ಕ್ರಮ: ಸಚಿವ ಡಾ. ಶರಣಪ್ರಕಾಶ್… Education | ದೈಹಿಕ ಶಿಕ್ಷಕರ ಸಹ ಶಿಕ್ಷಕರೆಂದು ಪರಿಗಣಿಸುವ ಕುರಿತು ಪರಿಶೀಲನೆ: ಶಿಕ್ಷಣ… Solar power & Wind power | ಸೌರ ಶಕ್ತಿ ಮತ್ತು ಪವನ… Legislative Council | ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ಆರೋಗ್ಯ ಸಚಿವ… KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು,… Education Department | ಕನ್ನಡ ಬೋಧಿಸದ ಕೇಂದ್ರ ಪಠ್ಯಕ್ರಮ ವಿರುದ್ಧ ಕ್ರಮಕ್ಕೆ ಮುಂದಾಗಿ:… ಬಿಜೆಪಿ ತರಹ ಕೇವಲ 10% ಜನರ ಕೈಹಿಡಿದು ಶೇ. 90% ಜನರನ್ನು ಕೈಬಿಟ್ಟಿಲ್ಲ:…

ಇತ್ತೀಚಿನ ಸುದ್ದಿ

Education | ದೈಹಿಕ ಶಿಕ್ಷಕರ ಸಹ ಶಿಕ್ಷಕರೆಂದು ಪರಿಗಣಿಸುವ ಕುರಿತು ಪರಿಶೀಲನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

17/03/2025, 22:12

ಬೆಂಗಳೂರು (reporterkarnataka.com): ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸುವ ಬಗ್ಗೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ರಾಮೋಜಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳು ಬೇರೆ ಬೇರೆ ಆಗಿರುತ್ತದೆ. ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತುತ ಜಾರಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಂತೆ ಗ್ರೂಪ್ ಬಿ ಮತ್ತು ಮುಖ್ಯ ಶಿಕ್ಷಕರು / ಉಪ ಪ್ರಾಂಶುಪಾಲರು ವೃಂದದ ಹುದ್ದೆಗೆ ಬಡ್ತಿಗೆ, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದವು ಪೋಷಕ ವೃಂದವಾಗಿರುತ್ತದೆ. ಮುಖ್ಯ ಶಿಕ್ಷಕರ ವೃಂದಕ್ಕೆ, ವೃಂದ ಮತ್ತು ನೇಮಕಾತಿ ನಿಯಮದಂತೆ ನಿಗದಿಪಡಿಸಿರುವ ವಿದ್ಯಾರ್ಹತೆ ಎಂದರೆ ಪದವಿ ಜೊತೆಗೆ ಶೈಕ್ಷಣಿಕ ಆಡಳಿತಕ್ಕೆ ಅಗತ್ಯ ಇರುವ ಬಿ.ಎಡ್ ಪದವಿ. ದೈಹಿಕ ಶಿಕ್ಷಣ ಶಿಕ್ಷಕರು ಬಿ.ಎಡ್. ಪದವಿಯನ್ನು ಹೊಂದಿರುವುದಿಲ್ಲ.
ಮುಖ್ಯ ಶಿಕ್ಷಕರು ಬೋಧನೆಯಲ್ಲಿ ಪ್ರಾವೀಣ್ಯತೆ ಹಾಗೂ ಅನುಭವವನ್ನು ಹೊಂದಿರುತ್ತಾರೆ. ಸಹ ಶಿಕ್ಷಕರ ಅನುಪಸ್ಥಿತಿಯಲ್ಲಿ ವಿಷಯ ಬೋಧನೆಯನ್ನು ಮಾಡುತ್ತಾರೆ. ಆದರೆ ದೈಹಿಕ ಶಿಕ್ಷಕರಿಗೆ ವಿಷಯ ಬೋಧನೆ ತರಬೇತಿ ಆಗಿಲ್ಲದೆ ಇರುವುದರಿಂದ ಸಹ ಶಿಕ್ಷಕರ ಅನುಪಸ್ಥಿತಿಯಲ್ಲಿ ವಿಷಯ ಬೋಧನೆಯನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಮುಖ್ಯ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು / ಹಿರಿಯ ಉಪನ್ಯಾಸಕರು ನಿರ್ದೇಶಕರು ಮಧ್ಯಾಹ್ನ ಯೋಜನೆ ಹಾಗೂ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಹುದ್ದೆಗಳಿಗೆ ಭರ್ತಿ ಹೊಂದಲು ಅವಕಾಶವಿರುತ್ತದೆ. ಈ ಎಲ್ಲಾ ಹುದ್ದೆಗಳು ಶೈಕ್ಷಣಿಕವಾಗಿ ಶಾಲೆಗಳಲ್ಲಿ ವಿಷಯ ಬೋಧನೆ ಅನುಭವವನ್ನು ಹಾಗೂ ಶೈಕ್ಷಣಿಕ ಮಾರ್ಗದರ್ಶನ ನೀಡುವ ಅನುಭವವನ್ನು ಅಪೇಕ್ಷಿಸುತ್ತದೆ. ಆದರೆ ದೈಹಿಕ ಶಿಕ್ಷಕರಿಗೆ ವಿಷಯ ಬೋಧನೆಯ ತರಬೇತಿ ಇರುವುದಿಲ್ಲ. ಬದಲಾಗಿ ದೈಹಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಾತ್ರ ತರಬೇತಿಯನ್ನು ಪಡೆದಿರುತ್ತಾರೆ.
ದೈಹಿಕ ಶಿಕ್ಷಣದ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ನಿರ್ವಹಿಸಲಾಗುತ್ತಿದ್ದು, ಇವರ ಪ್ರಾವೀಣ್ಯತೆ ಹಾಗೂ ಅನುಭವ ಆಧಾರದ ಮೇಲೆ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ, ಸಹಾಯಕ ನಿರ್ದೇಶಕರು (ದೈಹಿಕ ಶಿಕ್ಷಣ) ಸಹ ನಿರ್ದೇಶಕರು (ದೈಹಿಕ ಶಿಕ್ಷಣ) ಹುದ್ದೆಗಳಿಗೆ ಮುಂಬಡ್ತಿ ಕಲ್ಪಿಸಲಾಗಿದೆ. ಶೈಕ್ಷಣಿಕ ಆಡಳಿತದ ಹಿತದೃಷ್ಠಿಯಿಂದ ಪ್ರಸ್ತುತ ವೃಂದ ಮತ್ತು ನೇಮಕಾತಿ ನಿಯಮದಂತೆ ಪದವಿ ಹಾಗೂ ಶಿಕ್ಷಣದಲ್ಲಿ ಪದವಿ ವಿದ್ಯಾರ್ಹತೆ ಪೋಷಕ ವೃಂದ ಎಂಬುದಾಗಿ ಗುರುತಿಸಿರುವ ವೃಂದದಿಂದ ಮುಖ್ಯ ಶಿಕ್ಷಕರ ವೃಂದಕ್ಕೆ ಬಡ್ತಿಗಳನ್ನು ಪರಿಗಣಿಸಲಾಗುತ್ತಿದೆ. ಅದಗ್ಯೂ ದೈಹಿಕ ಶಿಕ್ಷಕರಿಗೆ ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ, ಆದೇಶಗಳನ್ನು ಪರಿಶೀಲಿಸಿ ನಂತರ ಮಾನ್ಯ ಮುಖ್ಯ ಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು