ಇತ್ತೀಚಿನ ಸುದ್ದಿ
ಹಂಪನಕಟ್ಟೆ: ಅಶ್ವಥ ಮರದ ಕೊಂಬೆ ಮುರಿದು ಬಿದ್ದು ಬಸ್ಸಿಗೆ ಕಾಯುತ್ತಿದ್ದ 3 ಮಂದಿ ವಿದ್ಯಾರ್ಥಿನಿಯರಿಗೆ ಗಾಯ
18/03/2025, 16:12
ಮಂಗಳೂರು(reporterkarnataka.com): ನಗರದ ಹೃದಯ ಭಾಗವಾದ ಹಂಪನಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ಬಳಿ ದೈತ್ಯಾಕಾರದ ಅಶ್ವಥ ಮರದ ಕೊಂಬೆಯೊಂದು ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಜನನಿಬಿಡವಾದ ಈ ಪ್ರದೇಶದಲ್ಲಿ ಏಕಾಏಕಿ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ಬಸ್ ಕಾಯುತ್ತಿದ್ದ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಸಂದರ್ಭದಲ್ಲಿ ಅನೇಕ ಸಾರ್ವಜನಿಕರು ಅಲ್ಲೇ ನಿಂತಿದ್ದು ಬಹು ದೊಡ್ಡ ಅವಘಡವೊಂದು ತಪ್ಪಿದೆ.






ಅಧಿವೇಶನದಲ್ಲಿರುವ ಶಾಸಕ ವೇದವ್ಯಾಸ ಕಾಮತ್ ಅವರು ವಿಷಯ ತಿಳಿದ ಕೂಡಲೇ ನಿಕಟಪೂರ್ವ ಸ್ಥಳೀಯ ಪಾಲಿಕೆ ಸದಸ್ಯೆ ಪೂರ್ಣಿಮಾ ಅವರನ್ನು ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿ, ಜಿಲ್ಲಾಧಿಕಾರಿ ಹಾಗೂ ನಗರ ಪಾಲಿಕೆ ಆಯುಕ್ತರಿಗೆ ಕರೆ ಮಾಡಿ ಗಾಯಾಳುಗಳ ಚಿಕಿತ್ಸಾ ವೆಚ್ಚ ಸಹಿತ ಕೊಂಬೆಯ ತೆರವಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.














