7:25 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

illegal Sand Mining | ಹರಿಹರಪುರ ತುಂಗಾ ನದಿ ತಟದಲ್ಲಿ ಅಕ್ರಮ ಮರಳುಗಾರಿಕೆ: ಪಕ್ಷಾತೀತವಾಗಿ ನಡೆಯುತ್ತಿದೆ ಈ ದಂಧೆ!

18/03/2025, 16:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಸಮೀಪ ತುಂಗಾ ನದಿ ತಟದಲ್ಲಿ ಎಗ್ಗಿಲ್ಲದೆ ಅಕ್ರಮ ಮರಳು ದಂಧೆ ನಡೆಯುತ್ತಿದೆ. ರಾತ್ರಿ ವೇಳೆ ಕಾಡಿನ ದಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡಲಾಗುತ್ತಿದೆ.
ಪಕ್ಷಾತೀತವಾಗಿ ಎಲ್ಲರೂ ಹೊಂದಾಣಿಕೆ ಮೇಲೆ ಮರಳು ದಂಧೆ ಮಾಡುತ್ತಿರುವುದರಿಂದ ಆಡಳಿತ ಪಕ್ಷವಾಗಲಿ, ವಿರೋಧ ಪಕ್ಷದವರಾಗಲಿ ಯಾರೂ ಇದರ ಬಗ್ಗೆ ಸೊಲ್ಲೆತ್ತುತ್ತಿಲ್ಲ. ನಿತ್ಯ ಲಾರಿ, ಟಿಪ್ಪರ್, ಟ್ರ್ಯಾಕ್ಟರ್ ನಲ್ಲಿ ಹತ್ತಾರು ಲೋಡ್ ಮರಳು
ಸಾಗಾಟ ನಡೆಸಲಾಗುತ್ತಿದೆ.


ಸಾರ್ವಜನಿಕರ ಕಣ್ಣಿಗೆ ಬೀಳಬಾರದೆನ್ನುವ ಉದ್ದೇಶದಿಂದ ದಂಧೆಕೋರರು ರಾತ್ರಿ ವೇಳೆ ಮಾತ್ರ ಕಾರ್ಯಾಚರಣೆ ನಡೆಸುತ್ತಾರೆ.
ಕದ್ದು ಮರಳು ಸಾಗಿಸಿ ಸರ್ಕಾರಿ ಜಾಗದಲ್ಲಿ ಶೇಖರಿಸಿ ಬಳಿಕ ಮಾರಾಟ ಮಾಡಲಾಗುತ್ತದೆ.
ಯಾರಾದ್ರು ಬಂದರೆ ಮಾಹಿತಿ ನೀಡಲು ಸ್ಥಳಿಯ ಕೆಲವು ಯುವಕರನ್ನು ಬಳಕೆ ಮಾಡಲಾಗುತ್ತಿದೆ. ರಸ್ತೆಯುದ್ದಕ್ಕೂ ಅಲ್ಲಲ್ಲೇ ಇಬ್ಬರು ಹುಡುಗರನ್ನ ದಂಧೆಕೋರರು ನಿಲ್ಲಿಸಿರುತ್ತಾರೆ.
ಸ್ಥಳಕ್ಕೆ ಡಿವೈಎಸ್ಪಿ, ಪಿಎಸ್ಐ ನೇತೃತ್ವದಲ್ಲಿ ಭೇಟಿ, ಪರಿಶೀಲನೆ ನಡೆಸಿದ್ದಾರೆ. ನದಿ ಬಳಿ ಹೋಗೋ ದಾರಿಗೆಲ್ಲಾ ಟ್ರಂಚ್ ಪೊಲೀಸರು ನಿರ್ಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು