9:58 PM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

Primary Teachers | ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಮಧು ಬಂಗಾರಪ್ಪ

20/03/2025, 14:38

ಬೆಂಗಳೂರು (reporterkarnataka.com):ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ ರಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಅವರು ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯ ರಾಮೋಜಿಗೌಡರು ನಿಯಮ 330 ರಡಿ ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ, ಸೇವಾ ಹಿರಿತನದ ಸೌಲಭ್ಯ ಕುರಿತಂತೆ ನೀಡಿದ ಸೂಚನಾ ಪತ್ರಕ್ಕೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಪರಿಶೀಲಿಸಿ ವರದಿ ನೀಡಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈಗಾಗಲೇ ಎರಡು ಬಾರಿ ಸಭೆ ನಡೆದಿದ್ದು, ಬೇಡಿಕೆಗಳ ಸಾಧಕ -ಬಾಧಕ ಹಾಗೂ ನಿಯಮಗಳಲ್ಲಿನ ಅವಕಾಶಗಳ ಕುರಿತು ಪರಿಶೀಲಿಸಲಾಗುತ್ತಿದೆ. ಸಮಿತಿ ವರದಿ ಬಂದ ನಂತರ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು‌ ಎಂದು‌ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು