12:29 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

Primary Teachers | ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಮಧು ಬಂಗಾರಪ್ಪ

20/03/2025, 14:43

ಬೆಂಗಳೂರು(reporterkarnataka.com):ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ ರಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಹೇಳಿದರು
ಅವರು ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯ ರಾಮೋಜಿಗೌಡರು ನಿಯಮ 330 ರಡಿ ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ, ಸೇವಾ ಹಿರಿತನದ ಸೌಲಭ್ಯ ಕುರಿತಂತೆ ನೀಡಿದ ಸೂಚನಾ ಪತ್ರಕ್ಕೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಪರಿಶೀಲಿಸಿ ವರದಿ ನೀಡಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈಗಾಗಲೇ ಎರಡು ಬಾರಿ ಸಭೆ ನಡೆದಿದ್ದು, ಬೇಡಿಕೆಗಳ ಸಾಧಕ -ಬಾಧಕ ಹಾಗೂ ನಿಯಮಗಳಲ್ಲಿನ ಅವಕಾಶಗಳ ಕುರಿತು ಪರಿಶೀಲಿಸಲಾಗುತ್ತಿದೆ. ಸಮಿತಿ ವರದಿ ಬಂದ ನಂತರ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು‌ ಎಂದು‌ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು