9:15 AM Saturday28 - February 2026
ಬ್ರೇಕಿಂಗ್ ನ್ಯೂಸ್
ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ

ಇತ್ತೀಚಿನ ಸುದ್ದಿ

ಅವಘಡ, ವಿಪತ್ತು ತಡೆಗೆ ಏಕೀಕೃತ ಸುರಕ್ಷತಾ ವ್ಯವಸ್ಥೆ ಜಾರಿಗೊಳಿಸಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

20/03/2025, 20:24

ಮಂಗಳೂರು(reporterkarnataka.com): ಕೈಗಾರಿಕೆಗಳು ಹಾಗೂ ಜನವಸತಿ ಪ್ರದೇಶಗಳಲ್ಲಿ ಅವಘಡ ಮತ್ತು ವಿಪತ್ತುಗಳಿಂದ ರಕ್ಷಿಸಲು ಏಕೀಕೃತ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಕರೆ ನೀಡಿದ್ದಾರೆ.
ಅವರು ಗುರುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ 54ನೇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ರಿಸ್ಕ್ ಕೈಗಾರಿಕೆಗಳು ಸೇರಿದಂತೆ ವಿವಿಧ ರೀತಿಯ ಉದ್ಯಮಗಳು ಇವೆ. ಇವು ತಮ್ಮ ಸುರಕ್ಷತಾ ವ್ಯವಸ್ಥೆಯನ್ನು ಆಗಿಂದ್ದಾಗೆ ಪರಿಶೀಲಿಸುತ್ತಿರಬೇಕು. ಯಾವುದೇ ಅನಾಹುತಗಳಾದರೆ ಅವುಗಳ ಪರಿಣಾಮ ಇತರೆ ಪ್ರದೇಶಗಳಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಕೈಗಾರಿಕೆಗಳು ಮತ್ತು ಜನವಸತಿ ಪ್ರದೇಶಗಳ ಸುರಕ್ಷತೆಗೆ ಎಲ್ಲಾ ಭಾಗೀದಾರಿ ಇಲಾಖೆಗಳು ಹಾಗೂ ಸುರಕ್ಷತಾ ಏಜೆನ್ಸಿಗಳು ಏಕೀಕೃತವಾದ ಸುರಕ್ಷತಾ ವ್ಯವಸ್ಥೆಯನ್ನು ಹೊಂದಬೇಕು. ಇದರಿಂದ ಯಾವುದೇ ಅನಾಹುತಗಳ ಸಂದರ್ಭದಲ್ಲಿ ಜೀವ ಹಾನಿ ಮತ್ತು ನಷ್ಟದ ಪ್ರಮಾಣವನ್ನು ತಗ್ಗಿಸಬಹುದಾಗಿದೆ ಎಂದು ಅವರು ಹೇಳಿದರು.
ನಾಗರೀಕರು ತಮ್ಮ ದೈನಂದಿನ ಬದುಕಿನಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನು ಆಗಿಂದ್ದಾಗೆ ಪರಿಶೀಲಿಸಬೇಕು. ಯಾವುದೇ ಅನಾಹುತಗಳಿಂದ ಮಾನಸಿಕ ಸ್ಥಿರತೆ ಮೇಲೂ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸುರಕ್ಷತಾ ವ್ಯವಸ್ಥೆಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಜಂಟಿ ನಿರ್ದೇಶಕ ನರೇಂದ್ರಬಾಬು , ಎಂ.ಆರ್.ಪಿ.ಎಲ್ ರಿಫೈನರಿ ನಿರ್ದೇಶಕ ನಂದಕುಮಾರ್ ಪಿಲ್ಲೈ, ರಾಷ್ಟ್ರೀಯ ಸುರಕ್ಷತಾ ಕೌನ್ಸಿಲ್ ಮಂಗಳೂರು ಘಟಕದ ಸಮನ್ವಯಕಾರ ಪಿ.ಎಫ್ ಮರಿಯಣ್ಣನವರ್ ಉಪಸ್ಥಿತರಿದ್ದರು.
ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಉಪ ನಿರ್ದೇಶಕ ಎಂ.ಎಸ್ ಮಹಾದೇವ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು