7:16 AM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

Minior Student Suicide | ಚಿಕ್ಕಮಗಳೂರು: ಫೇಲ್ ಆಗುವ ಭಯದಿಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

20/03/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಕಡೂರು ತಾಲೂಕಿನ ಡಿ. ಕಾರೇಹಳ್ಳಿಯಲ್ಲಿ 9ನೇ ತರಗತಿಯಲ್ಲಿ ಫೇಲ್ ಆಗುವ ಭಯದಿಂದ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಮೃತಳನ್ನು ವರ್ಷಿಣಿ (15) ಎಂದು ಗುರುತಿಸಲಾಗಿದೆ. ಬಾಣಾವರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವರ್ಷಿಣಿ, ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ಮನನೊಂದಿದ್ದಳು. ಶುಂಠಿಗೆ ತಂದಿದ್ದ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಘಟನೆಯ ಮಾಹಿತಿ ಪಡೆದ ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯರ ಪ್ರಕಾರ, ವಿದ್ಯಾರ್ಥಿನಿ ವರ್ಷಿಣಿ ಪಾಠದಲ್ಲಿ ಉತ್ತಮ ವಿದ್ಯಾರ್ಥಿನಿಯಾಗಿದ್ದರೂ ಪರೀಕ್ಷಾ ಫಲಿತಾಂಶದ ಭಯದಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಳು. ಈ ದಾರುಣ ಘಟನೆ ಕುಟುಂಬ ಮತ್ತು ಸುತ್ತಮುತ್ತಲಿನ ಜನರನ್ನು ಶೋಕ ಸಮುದ್ರದಲ್ಲಿ ಮುಳುಗಿಸಿದೆ.
ಪೋಷಕರು ಮತ್ತು ಶಿಕ್ಷಕರಿಗೆ ವಿದ್ಯಾರ್ಥಿಗಳ ಮನಸ್ಥಿತಿಯ ಬಗ್ಗೆ ಹೆಚ್ಚಿನ ಜಾಗೃತಿಯ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಮಾನಸಿಕ ಸಮತೋಲನ ಹಾಗೂ ಪ್ರೇರಣೆ ನೀಡುವ ಮೂಲಕ ಇಂತಹ ಅನಾಹುತಗಳನ್ನು ತಪ್ಪಿಸಲು ಸಾಧ್ಯ.

ಇತ್ತೀಚಿನ ಸುದ್ದಿ

ಜಾಹೀರಾತು