10:53 PM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

Karnataka Assembly | ಹನಿ ಟ್ರ್ಯಾಪ್: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

21/03/2025, 19:13

ಬೆಂಗಳೂರು(reporterkarnataka.com): ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ. ಎನ್. ರಾಜಣ್ಣ ಅವರು ಹನಿ ಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದು ಈ ಬಗ್ಗೆ ಉತ್ತರಿಸಲು ಕೋರಿ ಇದಕ್ಕೆ ಕಾರಣರಾದವರನ್ನು ವಜಾ ಮಾಡಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಹಾಗೂ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ಸಂದರ್ಭದಲ್ಲಿ ಸಿಎಂ ಮೇಲಿನಂತೆ ಉತ್ತರಿಸಿದರು.
ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್. ರಾಜಣ್ಣ ಅವರು ಮಾಡಿರುವ ಆರೋಪಕ್ಕೆ ಈಗಾಗಲೇ ಗೃಹ ಸಚಿವರು ಉತ್ತರಿಸಿದ್ದಾರೆ. ಪ್ರಕರಣದಲ್ಲಿ ಯಾರೇ ಆಗಿದ್ದರೂ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆ ಎಂದು ಗೃಹ ಸಚಿವರು ಉತ್ತರಿಸಿದ ಮೇಲೆ ಪುನ: ಪ್ರಸ್ತಾಪಿಸುವುದು ತರವಲ್ಲ. ಹನಿ ಟ್ರ್ಯಾಪ್ ಯಾರೇ ಮಾಡಿಸಿದ್ದರೂ ಅದು ತಪ್ಪೇ ಎಂದರು. ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು