6:47 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

CM v/s Ex CM ಹನಿಟ್ರ್ಯಾಪ್ ಪ್ರಕರಣ; ರಾಜ್ಯದಲ್ಲಿ ಕ್ರಿಮಿನಲ್ ಕ್ಯಾಬಿನೆಟ್; ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಬಸವರಾಜ ಬೊಮ್ಮಾಯಿ

21/03/2025, 19:16

ನವದೆಹಲಿ(reporterkarnataka.com): ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ನಡೆದಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.‌
ಈ ಕುರಿತು ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಪಕ್ಷ ಆಡಳಿತವನ್ನು ನೈತಿಕ ಅಧಪತನಕ್ಕೆ ತೆಗೆದುಕೊಂಡು ಹೋಗಿದೆ. ಈ ಸರ್ಕಾರದ ಅವಧಿಯಲ್ಲಿ ಎರಡು ವರ್ಷದಲ್ಲಿ ಸುಮಾರು ಹತ್ತು ಹಗರಣಗಳು ಹೊರಗೆ ಬಂದಿವೆ. ಎಲ್ಲಿ ಕೈ ಹಾಕಿದರೂ ಅಲ್ಲಿ ಹಗರಣ ಸಿಗುತ್ತವೆ. ಹೀಗಾಗಿ ವಿಧಾನಸಭೆಯಲ್ಲಿ ನೈತಿಕ ಅಧಪತನ ನೋಡುತ್ತಿದ್ದೇವೆ‌.
ಇದುವರೆಗೂ ರಾಜ್ಯದಲ್ಲಿ ಮನಿ ಕ್ರೈಸಿಸ್ ಇತ್ತು‌ ಈಗ ಹನಿ ಕ್ರೈಸಿಸ್ ಶುರುವಾಗಿದೆ. ರಾಜ್ಯ ಸರ್ಕಾರ ಆರ್ಥಿಕವಾಗಿಯೂ ದಿವಾಳಿಯಾಗಿದೆ. ನೈತಿಕವಾಗಿಯೂ ದಿವಾಳಿಯಾಗಿದೆ. ಒಬ್ಬ ಸಂಪುಟ ಸಚಿವರು ವಿಧಾನಸಭೆಯಲ್ಲಿ ತಮ್ಮ ಮೇಲೆ ಹನಿ ಟ್ರ್ಯಾಪ್ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳುವ ಸ್ಥಿತಿಗೆ ಬಂದಿದ್ದಾರೆ. ಕಳೆದ ಹದಿನೈದು ದಿನಗಳಿಂದ ವಿಧಾನಸಭೆಯ ಮೊಗಸಾಲೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದ್ದರೂ ಮುಖ್ಯಮಂತ್ರಿಗಳು ಸುಮ್ಮನೆ ನೋಡುತ್ತ ಕೂತಿದ್ದಾರೆ. ಇವತ್ತು ಅದು ಸ್ಪೋಟಗೊಂಡಿದೆ. ಸಚಿವ ಸಂಪುಟದಲ್ಲಿಯೇ ಈ ರೀತಿ ನಡೆಯುತ್ತಿರುವಾಗ ಈ ಸಚಿವ ಸಂಪುಟವನ್ನು ಏನೆಂದು ಕರೆಯಬೇಕು. ರಾಜ್ಯವನ್ನು ಆಳುವ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ ಎಂದು ಹೇಳಿದರು.
ನನ್ನ ಪ್ರಕಾರ ಈ ಅನೈತಿಕ ಚಟುವಟಿಕೆ ಮುಖ್ಯಮಂತ್ರಿ ಯವರ ಮೂಗಿನ ನೇರಕ್ಕೆ ನಡೆಯುತ್ತಿರುವುದರಿಂದ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ರಾಜ್ಯದ ಜನತೆ ಯಾಕಾದರೂ ಇಂತಹ ಸರ್ಕಾರ ಅಧಿಕಾರಕ್ಕೆ ತಂದಿದ್ದೇವೆ ಎಂದು ಪಶ್ಚಾತಾಪ ಪಡುವಂತಾಗುತ್ತದೆ ಎಂದು ಹೇಳಿದರು.
ಸಹಕಾರ ಸಚಿವರು 48 ಜನರ ಸಿಡಿಗಳಿವೆ ಎಂದು ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ರಾಜಣ್ಣ ಅವರಿಗೆ ಈ ಬಗ್ಗೆ ಇನ್ನೂ ಹೆಚ್ಚಿ ಮಾಹಿತಿ ಇರಬಹುದು ಅವರು ಅದೆಲ್ಲವನ್ನೂ ತನಿಖೆಗೆ ಒಪ್ಪಿಸಬೇಕು. ಈ ರೀತಿಯ ಅನೈತಿಕ ಚಟುವಟಿಕೆಗಳನ್ನು ಮಾಡುವ ಯಾವುದೇ ಪಕ್ಷದ ವ್ಯಕ್ತಿ ಇರಲಿ ಅವರ ವಿರುದ್ದ ಕಠಿಣ ಶಿಕ್ಷೆಯಾಗಬೇಕು. ಈ ಪ್ರಕರಣದ ತನಿಖೆಯನ್ನು ಹೈಕೋರ್ಟ್ ನ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಈ ಪ್ರಕರಣದ ಬಗ್ಗೆ ಈಗಾಗಲೇ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿರುವುದರಿಂದ ಕೇಂದ್ರದ ನಾಯಕರ ಗಮನಕ್ಕೂ ಬಂದಿರುತ್ತದೆ. ಈ ಪ್ರಕರಣದ ತನಿಖೆಯ ಹಾದಿಯ ನಂತರ ಮುಂದಿನ ಬೆಳವಣಿಗೆಗಳು ನಡೆಯಲಿವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು