11:12 PM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

FIR Against Madhwaraj | ಮಹಿಳೆಯ ಕಟ್ಟಿ ಹಾಕಿ ಹಲ್ಲೆ ಪ್ರಕರಣದ ಸಮರ್ಥನೆ?: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ದ ಎಫ್ ಐಆರ್

23/03/2025, 12:08

ಉಡುಪಿ(reporterkarnataka.com): ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮಲ್ಪೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದಾರೆ.
ಮಲ್ಪೆಯಲ್ಲಿ ಇತ್ತೀಚೆಗೆ ಮೀನು ಕದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಘಟನೆಯ
ಸಂಬಂಧ ನಡೆದ ಬಂಧನದ ವಿರುದ್ಧ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಮೋದ್ ಮಧ್ವರಾಜ್ ಮಾತನಾಡಿದ್ದರು.
ಮಲ್ಪೆ ಮೀನುಗಾರರ ಸಂಘ (ರಿ) ಮತ್ತು ಇತರ ಪ್ರಮುಖ ಮೀನುಗಾರಿಕಾ ಸಂಘಟನೆಗಳು ಈ ಪ್ರತಿಭಟನೆಯನ್ನು ಆಯೋಜಿಸಿದ್ದವು. ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಪ್ರಮೋದ್ ಮಧ್ವರಾಜ್ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಮಲ್ಪೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮನೆಗೆ ಕಳ್ಳರು ಬಂದರೆ ನಾವು ಏನು ಮಾಡುತ್ತೇವೆ? ಪೊಲೀಸರು ಬರುವುದು ತಡವಾದಲ್ಲಿ ಕಳ್ಳರನ್ನು ಕಟ್ಟಿ ಹಾಕಲೇಬೇಕಲ್ವಾ? ನಾವು ಮಹಿಳೆಗೆ ತಲವಾರ್, ಮಚ್ಚಿನಲ್ಲಿ ಹೊಡೆದಿದ್ದೇವಾ? ಕೇವಲ ಕೆನ್ನೆಗೆ ಬಾರಿಸಿದ್ದೇವೆ ಎಂದು ಮಹಿಳೆ ಮೇಲೆ ನಡೆದ ಹಲ್ಲೆಯನ್ನು ಸಮರ್ಥನೆ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು