12:04 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

IndiGo6E | ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

23/03/2025, 20:31

ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರು ಮತ್ತು ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿ ಮಧ್ಯೆ ಮತ್ತೊಂದು ವಿಮಾನಯಾನ ಅತಿ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಇದೇ ಮಾರ್ಚ್‌ 30ರಿಂದ ಮತ್ತೊಂದು ಇಂಡಿಗೋ (IndiGo6E) ವಿಮಾನ ಸಂಚಾರ ಆರಂಭವಾಗಲಿದೆ. ಈ ಎರಡು ಮಹಾನಗರಗಳ ನಡುವೆ ಈಗ ನಿತ್ಯ ಮೂರು ವಿಮಾನಗಳ ಸಂಚಾರ ಆರಂಭವಾದಂತೆ ಆಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಈವರೆಗೆ ಎರಡು ವಿಮಾನಗಳ ಸೇವೆಯಿದೆ. ಆದರೆ, ಮತ್ತೊಂದು ವಿಮಾನ ಯಾನದ ಅವಶ್ಯಕತೆಯಿದ್ದು, ಶೀಘ್ರವೇ ಕ್ರಮ ಕೈಗೊಳ್ಳಿ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಇಂಡಿಗೋ ತ್ವರಿತವಾಗಿ ವಿಮಾನ ಸೇವೆಗೆ ನಿರ್ಣಯ ಕೈಗೊಂಡಿದೆ.
ವಿಮಾನ ಹಾರಾಟ ಸಮಯ ಇಂತಿದೆ. Bengaluru – Hubballi 6E7056 9:55 AM – 11:20 AM ಹಾಗೂ Hubballi – Bengaluru 6E 7263 11:55 AM – 1:20 PM. ಈ ವಿಮಾನ ಸೇವೆಯಿಂದ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಂದ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ.
ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ ಕಲ್ಪಿಸಿದ್ದಕ್ಕಾಗಿ ಸಚಿವ ಜೋಶಿ ಅವರು ಇಂಡಿಗೋ ಆಡಳಿತ ವರ್ಗಕ್ಕೆ ಧನ್ಯವಾದ ಹೇಳಿದ್ದಾರೆ. ಅಲ್ಲದೇ, ಹುಬ್ಬಳ್ಳಿ ಮತ್ತು ಅಹ್ಮದಾಬಾದ್‌ ನಡುವೆಯೂ ವಿಮಾನಯಾನ ಆರಂಭಿಸುವಂತೆ ಇಂಡಿಗೋ ಅಧಿಕಾರಿಗಳ ಗಮನ ಸೆಳೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು