2:57 AM Saturday29 - March 2025
ಬ್ರೇಕಿಂಗ್ ನ್ಯೂಸ್
Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌ Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು… Speaker Talking | ವಿಧಾನ ಸೌಧಕ್ಕೆ ವರ್ಣರಂಜಿತ ದೀಪಾಲಂಕಾರ; ಯಾವಾಗ ಉದ್ಘಾಟನೆ?; ಸ್ಪೀಕರ್… ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ… ಕೋಲಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ; ತೇರಹಳ್ಳಿ… Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ… Medical College | ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್. ಪಾಟೀಲ್ ಹೆಸರು: ರಾಜ್ಯ… BJP Internal War | ಯಡಿಯೂರಪ್ಪ ಕುಟುಂಬದ ಕಟು ಟೀಕೆಕಾರ ಯತ್ನಾಳ್ ಗೆ…

ಇತ್ತೀಚಿನ ಸುದ್ದಿ

State Govt | ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿ ಮಧ್ಯಂತರ ವರದಿ ಸಲ್ಲಿಸಿದ ಬಳಿಕ ಒಳ ಮೀಸಲಾತಿ ಜಾರಿಗೆ ಕ್ರಮ

24/03/2025, 21:59

ಬೆಂಗಳೂರು (reporterkarnatak.com): ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.
ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ನಡೆದ ಸಭೆ ಬಳಿಕ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಇದನ್ನು ಹೇಳಿದ್ದೇವೆ. ಎಂಪೆರಿಕಲ್ ಡೇಟಾ ನಿರ್ಧಿಷ್ಟವಾದ ಅಭಿಪ್ರಾಯ ಬರುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸಭೆಯಲ್ಲಿ ತಿಳಿಸಿದ್ದಾರೆ ಎಂದರು.
ಸಚಿವರುಗಳ ಮತ್ತು ಶಾಸಕರ ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಈವರೆಗೆ ಯಾವುದೇ ದೂರು ದಾಖಲಾಗಿಲ್ಲ. ದೂರು ಬಂದರೆ ಪರಿಶೀಲಿಸಿ, ಕದ್ದಾಲಿಕೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ನಾನು ಅಥವಾ ಸಿಎಂ ಆಗಲಿ ಯಾರು ಸಹ ಫೋನ್ ಕದ್ದಾಲಿಕೆಗೆ ಅನುಮತಿ ನೀಡಿಲ್ಲ ಎಂದು ಹೇಳಿದರು.
ನಾನು ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಗಮನಿಸಿದಿಲ್ಲ. ಅವರು ಯಾವ ಅರ್ಥದಲ್ಲಿ‌ ಹೇಳಿದ್ದಾರೆ ಅನ್ನೋದು ಗೊತ್ತಿಲ್ಲ. ನಮ್ಮ ಪಕ್ಷ ಹಾಗೂ ಮತ್ತು ಸರ್ಕಾರ ಸಂವಿಧಾನಕ್ಕೆ ಬದ್ಧವಾಗಿದೆ. ಈ ಆಶಯದೊಂದಿಗೆ ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಮಾಡಿದ್ದೇವೆ. ಸಂವಿಧಾನದ ಆಶಯ ಅನುಷ್ಟಾನ ಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.


ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಅವರು ಮಾತನಾಡಿ, ಒಳ ಮೀಸಲಾತಿ ಸಂಬಂಧ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಹಿರಿಯ ಸಚಿವರ ಜೊತೆ ಸುದೀರ್ಘ ಸಭೆ ನಡೆಸಲಾಗಿದೆ. ಒಳ‌ಮೀಸಲಾತಿ ಜಾರಿಗಾಗಿ ಈವರೆಗೂ ಆಗಿರುವ ಪ್ರಗತಿಯ ಮಾಹಿತಿಯನ್ನು ನಾಗ ಮೋಹನ್ ದಾಸ್ ಸಮಿತಿ ನೀಡಿದೆ. ಆದಷ್ಟು ಬೇಗ ಒಳಮೀಸಲಾತಿ ಜಾರಿಗೆ ಪ್ರಸ್ತಾಪ ಇಟ್ಟಿದ್ದಾರೆ ಎಂದು ತಿಳಿಸಿದರು.
ದತ್ತಾಂಶ ಆಧಾರದ ಮೇಲೆ ಸುದೀರ್ಘ ಚರ್ಚೆ ಮಾಡಿದ್ದೇವೆ. ನಾಗಮೋಹನ್ ದಾಸ್ ಅವರು ವಾರದೊಳಗೆ ಮಧ್ಯಂತರ ವರದಿ ನೀಡುತ್ತಾರೆ. ಆ ವರದಿ ಮೇಲೆ ಒಳಮೀಸಲಾತಿ ಜಾರಿ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.
ಎಂಪೆರಿಕಲ್ ಡೇಟಾ‌ ಸೇರಿದಂತೆ ಎಲ್ಲ ವಿಷಯಗಳನ್ನ ಚರ್ಚೆ ಮಾಡಿ, ನಮ್ಮ ಗಮನಕ್ಕೆ ತಂದಿದ್ದಾರೆ.‌ ನಾವು ಒಳ ಮೀಸಲಾತಿ ಜಾರಿ ಮಾಡಬೇಕು ಎಂಬುದು ನಮ್ಮ ಸರ್ಕಾರದ ಬದ್ಧತೆ. ಯಾವುದೇ ಸಮುದಾಯವೂ ಇಷ್ಟೇ ಪರ್ಸೇಂಟ್ ಮೀಸಲಾತಿ ಕೊಡುವಂತೆ ಬೇಡಿಕೆ ಇಟ್ಟಿಲ್ಲ. ಬಹುತೇಕ ಎಲ್ಲಾ ಇಲಾಖೆಗಳು ದತ್ತಾಂಶ ನೀಡಿವೆ. ಸುಪ್ರೀಂಕೋರ್ಟ್ ಮಾರ್ಗಸೂಚಿ ಪ್ರಕಾರ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಒಳ ಮೀಸಲಾತಿ ಜಾರಿ ಆಗುವವರೆಗೂ ಬ್ಯಾಕ್‌ಲಾಗ್ ಹುದ್ದೆ, ಮುಂಬಡ್ತಿ, ನೇಮಕಾತಿ ಯಾವುದನ್ನೂ ಮಾಡುವುದಿಲ್ಲ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಸಚಿವರಾದ ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಶಿವರಾಜ್ ತಂಗಡಗಿ ಅವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು