3:21 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

ಹಾಲು ಒಕ್ಕೂಟಗಳು ಇರುವುದು ಲಾಭ ಮಾಡುವುದಕ್ಕಲ್ಲ; ರೈತರಿಗೆ ಅನುಕೂಲಕ್ಕೆ: ಸಿಎಂ ಖಡಕ್ ನುಡಿ

24/03/2025, 22:04

*ಒಕ್ಕೂಟಗಳ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ. ಸಚಿವ ಸಂಪುಟಕ್ಕೆ ವಿಷಯ ರವಾನೆ*

*ಹೆಚ್ಚಳದ ಹಣ ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲೇಬೇಕು ಎನ್ನುವ ನಿಲುವಿಗೆ ಅಂಟಿಕೊಂಡ ಸಿಎಂ*

*ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನ: ಸಭೆ ನಿರ್ಣಯ*

ಬೆಂಗಳೂರು(reporterkarnataka.com):
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕಾವೇರಿಯಲ್ಲಿ ಇಂದು ನಡೆಸಿದ ಸಭೆಯ ಮುಖ್ಯಾಂಶಗಳು:


•ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಹಾಲಿನದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂಬುವುದು ಸರ್ಕಾರದ ದೃಢ ನಿಲುವು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದರು.

•ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ.

•ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ ಶೇ.2ಕ್ಕಿಂತ ಹೆಚ್ಚಾಗಬಾರದು.

*ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು ಎಂದು ಸಿಎಂ ಸೂಚಿಸಿದರು.

•ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಅವರು ಹೇಳಿದರು.

•ಬಳ್ಳಾರಿ ಹಾಲಿನ ಒಕ್ಕೂಟ 1.43 ಕೋಟಿಯಷ್ಟು ನಷ್ಟದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಒಟ್ಟು 3 ಒಕ್ಕೂಟಗಳು ನಷ್ಟದಲ್ಲಿವೆ.

•ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸಲು ಒಕ್ಕೂಟಗಳಿಂದ ಮನವಿ. ಇದಕ್ಕೆ ಒಪ್ಪದ ಸಿಎಂ*

ಇತ್ತೀಚಿನ ಸುದ್ದಿ

ಜಾಹೀರಾತು