4:07 AM Saturday29 - March 2025
ಬ್ರೇಕಿಂಗ್ ನ್ಯೂಸ್
Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌ Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು… Speaker Talking | ವಿಧಾನ ಸೌಧಕ್ಕೆ ವರ್ಣರಂಜಿತ ದೀಪಾಲಂಕಾರ; ಯಾವಾಗ ಉದ್ಘಾಟನೆ?; ಸ್ಪೀಕರ್… ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ… ಕೋಲಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ; ತೇರಹಳ್ಳಿ… Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ… Medical College | ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್. ಪಾಟೀಲ್ ಹೆಸರು: ರಾಜ್ಯ… BJP Internal War | ಯಡಿಯೂರಪ್ಪ ಕುಟುಂಬದ ಕಟು ಟೀಕೆಕಾರ ಯತ್ನಾಳ್ ಗೆ…

ಇತ್ತೀಚಿನ ಸುದ್ದಿ

ಅಂಬೇಡ್ಕರ್‌ ಗೆ ಜೀವಮಾನವಿಡಿ ಕಾಂಗ್ರೆಸ್‌ ಅಪಮಾನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

25/03/2025, 17:58

* ಸಂವಿಧಾನ ಬದಲಿಸುವ ಹೆಳಿಕೆಗೆ ಡಿಕೆ ಶಿವಕುಮಾರ್‌ ಮೊದಲು ಕ್ಷಮೆಯಾಚಿಸಲು ಆಗ್ರಹ*

ನವದೆಹಲಿ(reporterkarnataka.com): ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‌ ಪಕ್ಷ ಜೀವಮಾನವಿಡಿ ಅಪಮಾನಿಸುತ್ತಲೇ ಬಂದಿದೆ. ಈಗಲೂ ಅದನ್ನೇ ಮುಂದುವರಿಸಿದೆ. ಇದಕ್ಕಾಗಿ ಕಾಂಗ್ರೆಸ್‌ ಪಕ್ಷ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ದೇಶದ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದರು.
ದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್‌ ಅನೇಕ ಬಾರಿ ಸಂವಿಧಾನಕ್ಕೆ ಅಪಚಾರ ಮಾಡುತ್ತಲೇ ಇದೆ. ಇದು ಅವರ ಹಿಡನ್‌ ಅಜೆಂಡಾ ಆಗಿದೆ. ಅಂಬೇಡ್ಕರ್‌ ಜೀವಿತಾವಧಿಯಲ್ಲಿ ಪ್ರತಿ ಹಂತದಲ್ಲೂ ಅವರನ್ನು ಅವಮಾನಿಸಿದೆ. ಚುನಾವಣೆಯಲ್ಲಿ ಷಡ್ಯಂತ್ರ ನಡೆಸಿ ಸೋಲಿಸಿತು. ಆರ್ಟಿಕಲ್‌ ೩೫೦ ದುರುಪಯೋಗ ಪಡಿಸಿಕೊಂಡಿತು ಎಂದು ಆರೋಪಿಸಿದರು.
ಹಲವು ಬಾರಿ ಸಂವಿಧಾನ ತಿದ್ದುಪಡಿ ಮಾಡಿದ ಕಾಂಗ್ರೆಸ್‌, ಈಗ ಮತ್ತೆ ಡಿ.ಕೆ. ಶಿವಕುಮಾರ್‌ ಮೂಲಕ ತನ್ನ ಗುಪ್ತ ಕಾರ್ಯಸೂಚಿಯನ್ನು ಬಹಿರಂಗಪಡಿಸಿದೆ. ಕಾಂಗ್ರೆಸ್‌ ಯಾವತ್ತೂ ಅಂಬೇಡ್ಕರ್‌ ಅವರನ್ನು ಗೌರವಿಸಿಲ್ಲ. ಬದಲಾಗಿ ಅಪಮಾನ ಮಾಡುತ್ತಲೇ ಬಂದಿದೆ ಎಂದು ಕಿಡಿ ಕಾರಿದ ಸಚಿವ ಜೋಶಿ, ೧೯೫೧ರ ಚುನಾವಣೆ ಮೊದಲು ಮತ್ತು ತುರ್ತು ಪರಿಸ್ಥಿತಿ ವೇಳೆ ಹೀಗೆ ಎಲ್ಲ ಸಂದರ್ಭದಲ್ಲೂ ಕಾಂಗ್ರೆಸ್‌ ಹೇಗೆ ನಡೆದುಕೊಂಡಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಎಂದು ಹೇಳಿದರು.
ಈಗ ಕರ್ನಾಟಕದಲ್ಲಿ ಮುಸ್ಲಿಂರಿಗೆ ಶೇ.೪ರಷ್ಟು ಮೀಸಲಾತಿ ಕಲ್ಪಿಸಿರುವ ಕಾಂಗ್ರೆಸ್, ಮುಂದೊಂದು ದಿನ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದಿದೆ. ತನ್ನ ಮತ ಬ್ಯಾಂಕ್‌ಗಾಗಿ ಹಿಂದುಳಿದ ಸಮುದಾಯದವರಿಗೆ ತೀವ್ರ ಅನ್ಯಾಯ ಮಾಡುತ್ತಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಮತ್ತು ಡಿಕೆ ಶಿವಕುಮಾರ್ ಕೂಡಲೇ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಪ್ರಲ್ಹಾದ ಜೋಶಿ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು