ಇತ್ತೀಚಿನ ಸುದ್ದಿ
ಬಲ್ಮಠ ಸರಕಾರಿ ಬಾಲಕಿಯರ ಪಿಯು ಹಾಗೂ ಪದವಿ ಕಾಲೇಜಿನಲ್ಲಿ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ
26/03/2025, 11:39

ಮಂಗಳೂರು(reporterkarnataka.com): ಇನ್ಫೋಸಿಸ್ ಸಂಸ್ಥೆಯ ಸಿ.ಎಸ್.ಆರ್ ನಿಧಿಯಿಂದ ಪ್ರೇರಣಾ ಟ್ರಸ್ಟ್ ಸಹಕಾರದೊಂದಿಗೆ ಬಲ್ಮಠದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಕಂಪ್ಯೂಟರ್ ಲ್ಯಾಬನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆಗೊಳಿಸಿದರು.
ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯಾಸಂಗಕ್ಕೆ ಅನುಕೂಲವಾಗಲು ಕಂಪ್ಯೂಟರ್ ಲ್ಯಾಬ್ ಗಳ ಅಗತ್ಯವಿರುವ ಬಗ್ಗೆ ಈ ಹಿಂದೆಯೇ ಪ್ರಾಂಶುಪಾಲರುಗಳು ಶಾಸಕ ವೇದವ್ಯಾಸ ಕಾಮತ್ ಅವರಲ್ಲಿ ಮನವಿ ಸಲ್ಲಿಸಿದ್ದರು. ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಶಾಸಕರು ಈ ಬಗ್ಗೆ ವಿಶೇಷ ಗಮನಹರಿಸಿ ಆದ್ಯತೆಯ ಮೇರೆಗೆ ಅನುಕೂಲ ಮಾಡಿಕೊಡುವಂತೆ ಇನ್ಫೋಸಿಸ್ ಸಂಸ್ಥೆಯನ್ನು ಕೋರಿದ್ದರು. ಅದರಂತೆ ಇದೀಗ ಪದವಿ ಪೂರ್ವ ಕಾಲೇಜಿಗೆ 25 ಕಂಪ್ಯೂಟರ್ ಗಳು, ಪದವಿ ಕಾಲೇಜಿಗೆ 30 ಕಂಪ್ಯೂಟರ್ ಗಳ ಸಹಿತ ಸುಸಜ್ಜಿತ ಲ್ಯಾಬ್ ನಿರ್ಮಾಣಗೊಂಡಿದ್ದು ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ.
ಈ ಸಂದರ್ಭದಲ್ಲಿ ಪ್ರೇರಣಾ ಟ್ರಸ್ಟ್ ನ ರವಿರಾಜ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ವನಿತಾ ದೇವಾಡಿಗ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಬಾಳ ಹಾಗೂ ಸಂದೀಪ್, ವಾಸು, ಆಶಿಶ್, ಸೇರಿದಂತೆ ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.