ಇತ್ತೀಚಿನ ಸುದ್ದಿ
BJP Internal War | ಯಡಿಯೂರಪ್ಪ ಕುಟುಂಬದ ಕಟು ಟೀಕೆಕಾರ ಯತ್ನಾಳ್ ಗೆ ಬಿಜೆಪಿ ಗೇಟ್ ಪಾಸ್: 6 ವರ್ಷ ಉಚ್ಚಾಟನೆ
26/03/2025, 21:56

ಬೆಂಗಳೂರು(reporterkarnataka.com): ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಪಕ್ಷದ ಶಿಸ್ತು ಉಲ್ಲಂಘನೆಯ ಆರೋಪದ ಮೇಲೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿದೆ. ಈ ಹಿಂದೆ ಶಿಸ್ತು ಸಮಿತಿ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.
ಯತ್ನಾಳ್ ಅವರು ಪದೇ ಪದೇ ಪಕ್ಷದ ಹಿರಿಯ ನಾಯಕರ ಬಗ್ಗೆ ಟೀಕೆ ಮಾಡುತ್ತಾರೆ ಎಂಬ ಆರೋಪವಿತ್ತು. ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಅವರ ಕಟು ಟೀಕೆಕಾರರಾಗಿದ್ದರು.