2:42 PM Monday4 - August 2025
ಬ್ರೇಕಿಂಗ್ ನ್ಯೂಸ್
Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ…

ಇತ್ತೀಚಿನ ಸುದ್ದಿ

Khandre in Delhi | ಬಂಡೀಪುರ ರಾತ್ರಿ ಸಂಚಾರ ಕುರಿತು ಸಿಎಂ ಜತೆ ಚರ್ಚಿಸಿ ಸರ್ವಸಮ್ಮತ ನಿರ್ಧಾರ: ಅರಣ್ಯ ಸಚಿವ ಈಶ್ವರ ಖಂಡ್ರೆ

28/03/2025, 20:05

ನವದೆಹಲಿ(reporterkarnataka.com) :ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.
ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಈ ಪ್ರಕರಣ ಸರ್ವೋನ್ನತ ನ್ಯಾಯಾಲಯದಲ್ಲಿದ್ದು, ಪ್ರಸ್ತುತ ರಾತ್ರಿ 9ರಿಂದ ಬೆಳಗ್ಗೆ 6ಗಂಟೆಯವರೆಗೆ ನಿರ್ಬಂಧ ಜಾರಿಯಲ್ಲಿದೆ. ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ಬಾಂಧವ್ಯವನ್ನು ಗಮನದಲ್ಲಿಟ್ಟುಕೊಂಡು, ಎಲ್ಲರೊಂದಿಗೆ ಚರ್ಚಿಸಿ ಸೂಕ್ತವಾದ ತೀರ್ಮಾನ ಮಾಡಲು ಕ್ರಮ ವಹಿಸಲಾಗುವುದು ಎಂದರು.
*ಹಾಲಿನ ದರ ಏರಿಕೆ ಸಮರ್ಥನೆ:*
ಬೇರೆ ರಾಜ್ಯಗಳಲ್ಲಿನ ಹಾಲಿನ ದರಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ದರ ಕಡಿಮೆ ಇದೆ. ಜೊತೆಗೆ ಮೇವುನ ದರ ಮತ್ತು ಹೈನುಗಾರಿಕೆ ನಿರ್ವಹಣಾ ವೆಚ್ಚ ಅಧಿಕವಾಗಿದ್ದು ಇದಕ್ಕೆ ಹೋಲಿಸಿದರೆ ಹಾಲಿನ ದರ ಏರಿಕೆ ಮಾಡಿರುವುದು ಕಡಿಮೆಯೇ ಇದೆ. ಹೈನುಗಾರಿಕೆ ಮಾಡುವ ರೈತರಿಗೆ ನೆರವಾಗಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದರು.
*ಖರ್ಗೆ, ವೇಣುಗೋಪಾಲ್ ಭೇಟಿ:*
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಅರಣ್ಯ ಇಲಾಖೆಯ ಅಭಿವೃದ್ಧಿ ಯೋಜನೆಗಳು, ಪ್ರಕೃತಿ ಪರಿಸರ ಉಳಿಸಲು ಆರಂಭಿಸಿರುವ ಕಾರ್ಯಕ್ರಮಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಗುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿದ್ದಾಗಿ ತಿಳಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಬೀದರ್ ಸಂಸತ್ ಸದಸ್ಯ ಸಾಗರ್ ಖಂಡ್ರೆ ಅವರೊಂದಿಗೆ ಭೇಟಿ ಮಾಡಿ, ರಾಜ್ಯದ ಮತ್ತು ಪಕ್ಷದ ವಿಧ್ಯಮಾನಗಳ ಬಗ್ಗೆ ಚರ್ಚಿಸಿದ್ದಾಗಿ ತಿಳಿಸಿದ ಅವರು, ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೇತೃತ್ವದಲ್ಲಿ ಉತ್ತಮ ಆಡಳಿತ ನೀಡುತ್ತಿದೆ ಎಂದು ತಿಳಿಸಿದರು.
ರಾಷ್ಟ್ರೀಯ ನಾಯಕರು, ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗಲು ಸಂಘಟಿತ ಪ್ರಯತ್ನ ಮಾಡುವಂತೆ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಮಾಡಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಜನತೆಗೆ ಮನವರಿಕೆ ಮಾಡಿಸಲು ಸೂಚಿಸಿದ್ದಾರೆ. ಈ ಕಾರ್ಯವನ್ನು ಮಾಡಲಾಗುವುದು ಎಂದರು.
*ಸ್ಮಾರ್ಟ್ ಮೀಟರ್: ಬಿಜೆಪಿ ವಿರುದ್ಧ ಖಂಡ್ರೆ ಆಕ್ರೋಶ:*
ಸ್ಮಾರ್ಟ್ ಮೀಟರ್ ಖರೀದಿಯನ್ನು ಟೆಂಡರ್ ಪ್ರಕ್ರಿಯೆ ಮೂಲಕ ನಡೆಸಲಾಗಿದ್ದು, ಈ ಬಗ್ಗೆ ಇಂಧನ ಸಚಿವರು ಸದನದಲ್ಲೇ ಸ್ಪಷ್ಟೀಕರಣ ನೀಡಿದ್ದಾರೆ. ಬಿಜೆಪಿಯವರಿಗೆ ಯಾವುದೇ ವಿಷಯ ಇಲ್ಲ. ಹೀಗಾಗಿ ಅಪಪ್ರಚಾರದಲ್ಲಿ ತೊಡಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು