8:20 PM Friday4 - April 2025
ಬ್ರೇಕಿಂಗ್ ನ್ಯೂಸ್
Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ನಾಗಮಂಗಲ ತಾಲೂಕು ಕೊರೊನಾ ಮುಕ್ತವಾಗಿಸಿ: ಅಧಿಕಾರಿಗಳಿಗೆ ಶಾಸಕ ಸುರೇಶ ಗೌಡ ಸೂಚನೆ

22/05/2021, 09:30

ನಾಗಮಂಗಲ(reporterkarnataka news): ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕೇಂದ್ರವನ್ನು ಕೊರೊನಾ ಮುಕ್ತ ತಾಲ್ಲೂಕನ್ನಾಗಿ ಮಾಡಲು ಎಲ್ಲ ಅಧಿಕಾರಿಗಳು ಕಂಕಣಬದ್ಧವಾಗಿ ಕೆಲಸ ನಿರ್ವಹಿಸಬೇಕೆಂದು ಸೂಚನೆಯನ್ನು ಶಾಸಕ ಸುರೇಶಗೌಡಸೂಚನೆ ನೀಡಿದರು .

ನಾಗಮಂಗಲ ತಾಲ್ಲೂಕು ಪಂಚಾಯತಿ ಯಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರಿಗೆ ಆಹಾರ ಕಿಟ್  ನೀಡಿ ಅವರು ಮಾತನಾಡಿದರು.

ಕಳೆದ ಬಾರಿ ಕೊರೊನಾ ವಿಷಯದಲ್ಲಿ ನಾಗಮಂಗಲ ತಾಲ್ಲೂಕಿನಲ್ಲಿ ಮಾದರಿಯಾಗಿದ್ದು ಈ ಬಾರಿ ಹೆಚ್ಚು ಅತಿ ಹೆಚ್ಚು ಸೋಂಕಿತರ ಪ್ರಮಾಣ ಇದೆ. ಇದನ್ನು ತಡೆಯಲು ಅಧಿಕಾರಿಗಳು ಎಚ್ಚೆತ್ತು ಕಾರ್ಯನಿರ್ವಹಿಸಬೇಕೆಂದು ಎಚ್ಚರಿಕೆ ಕೊಟ್ಟರು.

ತಾಲ್ಲೂಕಿನಲ್ಲಿ ರೈತರು ಬೆಳೆದ ತರಕಾರಿಗಳನ್ನು ತಾಲೂಕಿನಾದ್ಯಂತ ಹಳ್ಳಿಗಳಲ್ಲಿ ಮಾರಾಟ ಮಾಡಲು ಅವಕಾಶವಿದ್ದು, ಸಾಮಾಜಿಕ ಅಂತರ ಕಾಪಾಡಿ ಕೊಂಡು ಮಾರಾಟ ಮಾಡಬಹುದೆಂದು ತಿಳಿಸಿದರು ಕಳೆದ ಬಾರಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ ನಾಗಮಂಗಲ ತಾಲ್ಲೂಕು ಮಾದರಿಯಾಗಿದ್ದುಈ ಬಾರಿಯೂ ಮುಕ್ತವಾಗಿಸಲು ಎಲ್ಲ ಅಧಿಕಾರಿಗಳು ಅತ್ಯಂತ ಕಾಳಜಿ ಪೂರ್ವಕವಾಗಿ ಕಾರ್ಯನಿರ್ವಹಿಸಬೇಕೆಂದು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಕುಂಞಿ ಅಹಮದ್ , ಕಾರ್ಯನಿರ್ವಹಣಾಧಿಕಾರಿಗಳಾದ ಸತೀಶ್ ಕುಮಾರ್, ವೈದ್ಯಾಧಿಕಾರಿ ಚೇತನ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಗಂಗಾಧರ್, ತಾಲ್ಲೂಕು ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು