6:09 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

Mangaluru | ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ ನಾಮಫಲಕ ಶಾಸಕ ವೇದವ್ಯಾಸ ಕಾಮತ್ ಅನಾವರಣ

31/03/2025, 14:26

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಟಿ.ಓ ಕಚೇರಿ ಬಳಿ “ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ಎಂಬ ನಾಮಫಲಕವನ್ನು ಹಲವು ಗಣ್ಯರ ಉಪಸ್ಥಿತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅನಾವರಣಗೊಳಿಸಿದರು.
ನಂತರ ಮಾತನಾಡಿದ ಶಾಸಕರು ಮಂಗಳಾದೇವಿ ದೇವಸ್ಥಾನ ಎಂಬುದು ಈ ಊರಿಗೆ ಮಾತ್ರವಲ್ಲ, ಪರವೂರು ಸೇರಿದಂತೆ ನಾಡಿನ ಪ್ರಸಿದ್ಧ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲೊಂದಾಗಿದೆ. ಇಂತಹ ಪುಣ್ಯಕ್ಷೇತ್ರದ ಹೆಸರಿನಲ್ಲಿ ಇನ್ನು ಮುಂದೆ ಈ ರಸ್ತೆ ಕರೆಯಲ್ಪಡುವುದು ಹರ್ಷ ತಂದಿದೆ ಎಂದರು.

ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆಯಿಂದ, ಎ ಬಿ. ಶೆಟ್ಟಿ ವೃತ್ತದಿಂದ, ಮಂಕಿಸ್ಮಾಂಡ್ ಮುಖಾಂತರ ಮಂಗಳಾದೇವಿ ದೇವಸ್ಥಾನ ಶಮಿ ಕಟ್ಟೆಯಾಗಿ ಫಸ್ಟ್ ರೈಲ್ವೆ ಬ್ರಿಡ್ಜ್ ವರೆಗಿನ ರಸ್ತೆ ಇದಾಗಿದ್ದು “ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ಎಂದು ನಾಮಕರಣವಾಗಿದೆ.
ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ರಮೇಶ್ ಕಂಡೆಟ್ಟು, ಮಾಜಿ ಮೇಯರ್ ಗಳಾದ ಮನೋಜ್ ಕುಮಾರ್ ಕೋಡಿಕಲ್, ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ, ದಿವಾಕರ್ ಪಾಂಡೇಶ್ವರ, ಮಾಜಿ ಉಪ ಮೇಯರ್ ಭಾನುಮತಿ, ಶೈಲೇಶ್ ಶೆಟ್ಟಿ, ಭರತ್ ಕುಮಾರ್, ಲತೀಫ್ ಕಂದುಕ, ರೇವತಿ ಶ್ಯಾಮ್ ಸುಂದರ್ ಶೆಟ್ಟಿ, ನಿತಿನ್ ಕುಮಾರ್, ಭಾಸ್ಕರ ಚಂದ್ರ ಶೆಟ್ಟಿ ಸೇರಿದಂತೆ ಅನೇಕ ಪ್ರಮುಖರು, ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು