4:04 PM Monday17 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ವಿವಾಹ ರದ್ದು: ತಮ್ಮ ತಮ್ಮ ಊರಲ್ಲೇ ಸರಳ ಮದುವೆಗೆ ಅವಕಾಶ

22/04/2021, 04:42

ಧರ್ಮಸ್ಥಳ(reporterkarnataka news):

ಕೋವಿಡ್-19 ಕುರಿತು ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿಯ ಪ್ರಕಾರ

ಏ.29ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಯೋಜಿಸಲಾದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದ್ದು, ತಮ್ಮ ತಮ್ಮ ಊರಿನಲ್ಲೇ ಸರಳ ವಿವಾಹಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಸಾಮೂಹಿಕ ವಿವಾಹಕ್ಕೆ ನೋಂದಾಯಿಸಿಕೊಂಡಿರುವ ಎಲ್ಲ ಜೋಡಿಗಳಿಗೂ ಕ್ಷೇತ್ರದ ವತಿಯಿಂದ ಆಶೀರ್ವಾದಪೂರ್ವಕವಾಗಿ ನೀಡಲಾಗುವ ವಿವಾಹ ಸಂಬಂಧಿ ವಸ್ತುಗಳಾದ ಧೋತಿ, ಸೀರೆ, ರವಿಕೆ ಕಣ, ಮಂಗಳಸೂತ್ರ ಇತ್ಯಾದಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಮುಖೇನ ವಧು-ವರರ ಮನೆಗೆ ಮುಟ್ಟಿಸಲಾಗುವುದು. ಏ.29 ರಂದು ನಿಗದಿತವಾಗಿರುವ ಗೋಧೋಳಿ ಲಗ್ನದಲ್ಲಿ ಅಥವಾ ತಮಗೆ ಅನುಕೂಲವಾದ ದಿನಾಂಕ ಮತ್ತು ಮುಹೂರ್ತದಲ್ಲಿ ನೋಂದಾಯಿಸಿಕೊಂಡಿರುವ ವಧು-ವರರು ತಮ್ಮ ತಮ್ಮ ಊರಿನ ಅಥವಾ ಕುಲದೇವರ ಸ್ಥಾನಗಳಲ್ಲಿ ಶಾಸ್ತ್ರೋಕ್ತವಾಗಿ ಮದುವೆ ಮಾಡಿಕೊಳ್ಳಬಹುದು.

ಈ ಸಂದರ್ಭ ಯೋಜನೆಯ ಕಾರ್ಯಕರ್ತರೋರ್ವರು ಹಾಜರಿದ್ದು, ಮದುವೆಯನ್ನು ಸರಳವಾಗಿಯೂ, ಸರಕಾರದ ಕೋವಿಡ್ ಶರತ್ತುಬದ್ಧ ನಿಯಮಾವಳಿಯಂತೆ ಆಚರಿಸಿಕೊಳ್ಳುವಂತೆ ಸೂಚಿಸಲಾಗಿದೆ. ನಂತರ ಕಾನೂನಿನಂತೆ ತಾಲೂಕಿನ ಉಪ ನೋಂದಾವಣಾಧಿಕಾರಿಯವರಲ್ಲಿ ವಿವಾಹ ನೋಂದಣಿಯನ್ನು ಮಾಡಿಕೊಳ್ಳಬಹುದು. ವಿವಾಹ ದಾಖಲಾತಿ ಮಾಹಿತಿಯನ್ನು ಕ್ಷೇತ್ರಕ್ಕೆ ಕಳುಹಿಸಿಕೊಡಬೇಕು ಎಂದು ಶ್ರೀ ಕ್ಷೇತ್ರದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು