1:48 PM Friday26 - December 2025
ಬ್ರೇಕಿಂಗ್ ನ್ಯೂಸ್
ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

Chikkamagaluru | ಸಾಲ ಮರು ಪಾವತಿಸುವಂತೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ?: ಮತ್ತೊಬ್ಬ ಅನ್ನದಾತ ಸಾವಿಗೆ ಶರಣು

01/04/2025, 11:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆ ತಾಲೂಕಿನ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹುಣಸಘಟ್ಟ ಗ್ರಾಮದಲ್ಲಿ ಸಾಲ ಬಾಧೆ ತಾಳಲಾಗದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮೃತಪಟ್ಟವರನ್ನು ಮಂಜಾ ನಾಯ್ಕ್ (45) ಎಂದು ಗುರುತಿಸಲಾಗಿದೆ.
ಮಂಜಾ ನಾಯ್ಕ್ ಅವರು ಯೂನಿಯನ್ ಬ್ಯಾಂಕಿನಿಂದ 4.70 ಲಕ್ಷ ಸಾಲ ಪಡೆದಿದ್ದರು.
ಸಾಲ ಕಟ್ಟುವಂತೆ ಬ್ಯಾಂಕ್ ನವರು ಲಾಯರ್ ನೋಟೀಸ್ ಕಳುಹಿಸಿದ್ದರು. ಈ ಮಧ್ಯೆ ಬ್ಯಾಂಕಿನ ವ್ಯವಸ್ಥಾಪಕ ಕಿರಣ್ ಹಾಗೂ ಗುಮಾಸ್ತ ಪಿರೋಜಿ ಸಾಲ ಮರುಪಾವತಿ ಮಾಡುವಂತೆ ಕಿರುಕುಳ ನೀಡುತ್ತಿದ್ದರು. ಬ್ಯಾಂಕ್ ಸಿಬ್ಬಂದಿಗಳು ಸಾರ್ವಜನಿಕ ಪ್ರದೇಶದಲ್ಲಿ ಮಂಜಾ ನಾಯ್ಕ್ ಅವರನ್ನು ನಿಲ್ಲಿಸಿ ನಿಂದಿಸುತ್ತಿದ್ದರು.
ಮಂಜಾ ನಾಯ್ಕ್ ಅವರು ಅವಮಾನ ತಾಳಲಾರದೆ,
ಮರ್ಯಾದೆಗೆ ಅಂಜಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆ ಫಲಕಾರಿಯಾಗದೆ ಮಂಜಾ ನಾಯ್ಕ್ ಅವರು ಕೊನೆಯಿಸಿರೆಳೆದಿದ್ದಾರೆ.
ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು