6:36 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Rajarajeshwari Temple | ಏ.6ರಂದು ಅಮ್ಮನೆಡೆಗೆ ನಮ್ಮ ನಡಿಗೆ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಪಾದಯಾತ್ರೆ

02/04/2025, 22:46

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ 5ನೇ ವರ್ಷದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಪಾದಯಾತ್ರೆ ಏಪ್ರಿಲ್‌ 6ರಂದು ಬೆಳಿಗ್ಗೆ 5.30ಕ್ಕೆ‌ ಏಕಕಾಲದಲ್ಲಿ ಬಿ.ಸಿ. ರೋಡಿನ ಕೈಕಂಬ ಪೊಳಲಿ ದ್ವಾರದಿಂದ ಮತ್ತು ಗುರುಪುರ ಕೈಕಂಬದಿಂದ ಆರಂಭಗೊಂಡು 9 ಗಂಟೆಗೆ ಪೊಳಲಿಯಲ್ಲಿ ಸಂಗಮವಾಗಲಿದೆ ಎಂದು ವಿಹಿಪ ಬಂಟ್ವಾಳ ಪ್ರಖಂಡ ಅಧ್ಯಕ್ಷ, ನ್ಯಾಯವಾದಿ ಪ್ರಸಾದ ಕುಮಾರ್ ರೈ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಟ್ವಾಳ ಶ್ರೀ ರಾಜರಾಜೇಶ್ವರಿ ದೇಗುಲವು ಇತಿಹಾಸ ಪ್ರಸಿದ್ಧ ದೇವಾಲಯವಾಗಿದೆ. ಎ ಗ್ರೇಡ್ ಮಾನ್ಯತೆ ಹೊಂದಿದೆ. ವಾರ್ಷಿಕ ವಾಗಿ ಸುಮಾರು ರೂ.8 ಕೋಟಿಗಳಷ್ಟು ಆದಾಯವಿದೆ. ದೇವಸ್ಥಾನದ ಆದಾಯವು ದೇವಾಲಯದ ಭಕ್ತ ಜನರಿಗೆ ವಿನಿಯೋಗವಾಗಬೇಕು ಎಂಬ ಬೇಡಿಕೆಯ ಮನವಿಯನ್ನು ದೇವಾಲಯದ ಆಡಳಿತ ಮಂಡಳಿಗೆ ಸಲ್ಲಿಸಲಾಗುವುದು ಎಂದು ಹೇಳಿದರು.
ದೇವಾಲಯಕ್ಕೆ ಬರುವ ಭಕ್ತರಿಗೆ ಹಿಂದು ಸಂಸ್ಕೃತಿಗೆ ಪೂರಕವಾದ ವಸ್ತ್ರ ಸಂಹಿತೆ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಸುಸಜ್ಜಿತ ಗೋಶಾಲೆ ನಿರ್ಮಾಣ ಮತ್ತು ನಿರ್ವಹಣೆ ಮಾಡಬೇಕು. ಬಾಲಸಂಸ್ಕಾರ ಕೇಂದ್ರ ತೆರೆದು ಧಾರ್ಮಿಕ ಶಿಕ್ಶಣ ನೀಡುವ ವ್ಯವಸ್ಥೆ ಮಾಡಬೇಕು.ಉಚಿತ ಸಾಮೂಹಿಕ ವಿವಾಹ, ಉತ್ಸವಗಳ ಸಂದರ್ಭದಲ್ಲಿ ರಾತ್ರಿ ಭೋಜನ ವ್ಯವಸ್ಥೆ ಮಾಡಬೇಕು. ದೇವಸ್ಥಾನದ ಪರಿಸರದಲ್ಲಿ ವ್ಯಾಪಾರ ಇತ್ಯಾದಿಗಳಿಗೆ ಅನ್ಯಮತೀಯರಿಗೆ ಅವಕಾಶ ನೀಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.
ವಿಹಿಪಂ, ಭಜರಂಗ ದಳ ಪದಾಧಿಕಾರಿಗಳಾದ ಕ.ಕೃಷ್ಣಪ್ಪ, ಭರತ್ ಕುಮ್ಡೇಲು, ರಾಜೇಶ ಗಂಜಿಮಠ, ಸಂತೋಷ ಸರಪಾಡಿ, ಕೇಶವ ದೈಪಲ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು