3:36 AM Tuesday8 - April 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ ಅವರಿಗೆ ‘ವಂದನಾ ಪ್ರಶಸ್ತಿ’ ಪ್ರದಾ‌‌ನ

03/04/2025, 11:28

ಮಂಗಳೂರುreporterkarnataka.com
ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟಾರ‌್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಜಂಟಿ ಆಶ್ರಯದಲ್ಲಿ ರಾಜ್ಯಮಟ್ಟದ 22 ನೇ ವಾರ್ಷಿಕ ಮತ್ತು 2025ನೇ ಸಾಲಿನ “ವಂದನಾ ಪ್ರಶಸ್ತಿ” ಯನ್ನು ಮಂಗಳೂರು ಮೂಲದ ಖ್ಯಾತ ಹೋಟೆಲ್ ಉದ್ಯಮಿ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಸಾಧಿಸಿದ ಗಣನೀಯ ಸಾಧನೆ ಮತ್ತು ಸಮಾಜಕ್ಕೆ ನೀಡಿದ ಸುಧೀರ್ಘ ಸೇವೆ, ಕೊಡುಗೆಯನ್ನು ಪರಿಗಣಿಸಿ ನಗರದ ಹೋಟೆಲ್ ಮೋತಿಮಹಲ್ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿದ ಸಮಾರಂಭದಲ್ಲಿ ಗೌರವಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭ ಪ್ರಶಸ್ತಿ ಪುರಸ್ಕೃತ ಡಾ. ಪ್ರಾಕಾಶ್ ಶೆಟ್ಟಿ ಮಾತನಾಡಿ, ಸಾಧನೆಗೆ ದೇವರ ಅನುಗ್ರಹ, ಗುರುಗಳ ಮಾರ್ಗದರ್ಶನ, ಉಪದೇಶ, ಹಿರಿಯರ ಆಶೀರ್ವಾದ, ಗ್ರಾಹಕರ ವಿಶ್ವಾಸ, ಕುಟುಂಬ, ಮಿತ್ರರ ಸಹಕಾರ, ಪ್ರೋತ್ಸಾಹ ಮತ್ತು ಉದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ವ್ಯವಹಾರ ದಕ್ಷತೆ, ಪ್ರಾಮಾಣಿಕತೆ, ಶ್ರಮ ಕಾರಣ ಎಂದರು. ರೋಟರಿ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿ. ಸಾಧಕರನ್ನು ಗುರುತಿಸಿ, ಸನ್ಮಾನಿಸಿ ಪ್ರಶಸ್ತಿ ಪ್ರಧಾನ ಮಾಡುವ ರೋಟರಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ನುಡಿದು ಪ್ರಶಸ್ತಿ ಸ್ವೀಕರಿಸಿದ ಬಳಿಕ ಇನ್ನಷ್ಟು ಸಾಧಿಸಲು ಪ್ರೇರಣೆ ಆಗುತ್ತಿದೆ ಎಂದು ನುಡಿದರು.

ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾದ ಡಾ. ದೇವದಾಸ್ ರ ಪ್ರಶಸ್ತಿ ಪ್ರಧಾನದ ವಿಧಿ ವಿಧಾನವನ್ನು ನೆರವೇರಿಸಿ ವಂದನಾ ಪ್ರಶಸ್ತಿಯು ತಮ್ಮ ಸಂಸ್ಥೆಯ ವೃತ್ತಿಪರ ಸೇವೆ ಯೋಜನೆಯ ಅಂಗವಾಗಿದ್ದು, ಈ ವಾರ್ಷಿಕ ಪ್ರಶಸ್ತಿಯನ್ನು ಸಾಧಕರನ್ನು ಗುರುತಿಸಿ ವಿವಿಧ ಕ್ಷೇತ್ರದಲ್ಲಿ ಸಾಧಿಸಿದ ಸಾಧನೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗುವುದು ಎಂದು ಮಾಹಿತಿ ನೀಡಿ ಪ್ರಸ್ತುತ ಸಾಲಿನ ಪ್ರಶಸ್ತಿ ವಿಜೇತರಾದ ಡಾ. ಪ್ರಕಾಶ್ ಶೆಟ್ಟಿಯವರು ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಸಾಧಿಸಿದ ಸಾಧನೆಯನ್ನು ಅಭಿನಂದಿಸಿದರು. ರೋಟರ್ಯಾಕ್ಟ್ ಸಂಸ್ಥೆಯ ಅಧ್ಯಕ್ಷ ಬಿದ್ದಪ್ಪ ಪ್ರಶಸ್ತಿ ವಿಜೇತರ ಪರಿಚಯ ಮತ್ತು ಸಾಧನೆಗಳ ಮಾಹಿತಿ ನೀಡಿದರು. ಸಹಾಯಕ ಗವರ್ನರ್ ಕೆ.ಎಂ.ಹೆಗ್ಡೆ ಅಭಿನಂದನಾ ಭಾಷಣ ಮಾಡಿದರು.

ರೋಟರ‌್ಯಾಕ್ಟ್ ಸಂಸ್ಥೆಯ ಜಿಲ್ಲಾ ಪ್ರತಿನಿಧಿ ಸಂಜಯ್ ಸಂಸ್ಥೆಯ ಸಾಪ್ತಾಹಿಕ ಗೃಹ ವಾರ್ತಾ ಪತ್ರಿಕೆ “ಸೆಂಟೊರ್” ಬಿಡುಗಡೆಗೊಳಿಸಿದರು. ರೋಟರಿ ಮಂಗಳೂರು ಸೆಂಟ್ರಲ್‌ನ ಅಧ್ಯಕ್ಷ ಬ್ರಿಯಾನ್ ಪಿಂಟೋ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸುಧೀರ್ ಶೆಟ್ಟಿಯವರನ್ನು ಸಂಸ್ಥೆಗೆ ನೂತನ ಸದಸ್ಯರಾಗಿ ಸೇರ್ಪಡಿಸಲಾಯಿತು.

ಕಾರ್ಯದರ್ಶಿ ರಾಜೇಶ್ ಸಿತಾರಾಮ್ ವರದಿ ಮಂಡಿಸಿದರು. ಸಂಸ್ಥೆಯ ಮಾಜಿ ಅಧ್ಯಕ್ಷ ರಾಜೇಶ್ ಶೆಟ್ಟಿ ಚುನಾಯಿತ ಅಧ್ಯಕ್ಷ ಭಾಸ್ಕರ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು ರೋರ್ಟಾಕ್ಸ್ ಸಂಸ್ಥೆಯ ಕಾರ್ಯದರ್ಶಿ ಅಕ್ಷಯ್ ರೈ ವಂದಿಸಿದರು. ಲೆಕ್ಕ ಪರಿಶೋಧಕ ನಿತಿನ್ ಶೆಟ್ಟಿಯವರು ಈ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು