4:25 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

Irrigation project | ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ: ಅನುಮತಿ ನೀಡಲು ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಕ್ಕೊತ್ತಾಯ

03/04/2025, 23:22

ನವದೆಹಲಿ(reporterkarnataka.com): ಕೇಂದ್ರ ಸರ್ಕಾರದ ಅನುಮತಿಗಾಗಿ ಬಾಕಿಯಿರುವ ಕರ್ನಾಟಕದ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತಾವು ವೈಯಕ್ತಿಕವಾಗಿ ಗಮನ ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್‌ ಅವರಿಗೆ ಬೇಡಿಕೆ ಪತ್ರ ಸಲ್ಲಿಸಿದರು.

ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಸಿದ್ದರಾಮಯ್ಯ ಅವರು, ದೇಶದಲ್ಲೇ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಗೂ ಅನುಷ್ಠಾನಗೊಳಿಸಲಾಗಿರುವ ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ. ಉತ್ಪಾದನೆಯಲ್ಲಿನ ಹೆಚ್ಚಳ, ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ನೀರಿನ ನಿರ್ವಹಣೆಯಲ್ಲಿ ಸುಧಾರಣೆ, ಹವಾಮಾನ ವೈಪರೀತ್ಯದ ನಿರ್ವಹಣೆ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ. ರಾಜ್ಯ ಸರ್ಕಾರ ಕೃಷಿ ಉತ್ಪಾದನೆ ಹೆಚ್ಚಳ, ರೈತರ ಆದಾಯ ಹೆಚ್ಚಳ ಮಾಡಲು ಪೂರಕವಾಗಿ ನಿರಂತರ ಮತ್ತು ಸಮರ್ಪಕ ನೀರಾವರಿ ಪೂರೈಕೆಗೆ ಬದ್ಧವಾಗಿದೆ ಎಂದಿದ್ದಾರೆ.
ಕರ್ನಾಟಕ ರಾಜ್ಯದ ನೀರಾವರಿ ಯೋಜನೆ/ವಿಷಯಗಳಿಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ಅನುಮತಿಗಾಗಿ ಬಾಕಿಯಿರುವ ಕರ್ನಾಟಕದ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತಾವು ವೈಯಕ್ತಿಕವಾಗಿ ಗಮನ ಹರಿಸಲು ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ಬಾಕಿಯಿರುವ ಎಲ್ಲಾ ನೀರಾವರಿ ಯೋಜನೆಗಳಿಗೆ/ಪ್ರಸ್ತಾವನೆಗಳಿಗೆ ಅನುಮತಿ ನೀಡಲು ಜಲಶಕ್ತಿ ಸಚಿವಾಲಯಕ್ಕೆ ತಾವು ನಿರ್ದೇಶನ ನೀಡಬೇಕು. ಈ ಯೋಜನೆಗಳು ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆ ಮೂಲಕ ರೈತರ ಕಲ್ಯಾಣಕ್ಕೆ ನೆರವಾಗಲಿದೆ‌ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು