1:23 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

Kannada | ಕನ್ನಡದಲ್ಲಿ ತಾಂತ್ರಿಕ ಶಿಕ್ಷಣ ಪಠ್ಯ: ಸರಕಾರದ ಕ್ರಮಕ್ಕೆ ಡಾ. ಪುರುಷೋತ್ತಮ ಬಿಳಿಮಲೆ ಶ್ಲಾಘನೆ

04/04/2025, 10:35

ಬೆಂಗಳೂರು(reporterkarnataka.com): ತಾಂತ್ರಿಕ ಶಿಕ್ಷಣ ಪಠ್ಯವನ್ನು ಕನ್ನಡದಲ್ಲಿಯೂ ಮುದ್ರಿಸಿ ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರವು ಮುಂದಾಗಿರುವುದು ಕನ್ನಡದ ಉಳಿವಿನ ದೃಷ್ಟಿಯಿಂದ ಅತ್ಯಂತ ಸ್ವಾಗತಾರ್ಹ ಕ್ರಮವೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯ ಪಟ್ಟಿದ್ದಾರೆ.
ಈ ಕುರಿತಂತೆ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ರವರಿಗೆ ಪತ್ರ ಬರೆದಿರುವ ಬಿಳಿಮಲೆ ಸರ್ಕಾರದ ಈ ಕ್ರಮ ವಿದ್ಯಾರ್ಥಿಗಳ ಗ್ರಹಿಕಾ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಲಿದ್ದು, ಇದು ಮಾದರಿ ನಡೆಯಾಗಿದೆ. ಈ ಸದಾಶಯವು ಸಾಕಾರಗೊಳ್ಳಬೇಕಾದಲ್ಲಿ ವಿಶ್ವವಿದ್ಯಾಲಯವು ಉಪನ್ಯಾಸಕರಿಗೆ ಗುಣಮಟ್ಟದ ತರಬೇತಿಯನ್ನು ನೀಡಿ ಕನ್ನಡದಲ್ಲಿ ಬೋಧಿಸುವಂತೆ ಪ್ರೋತ್ಸಾಹಿಸಬೇಕೆಂದು ಹೇಳಿದ್ದಾರೆ. ಕನ್ನಡದಲ್ಲಿ ಪದವಿ ಪಡೆಯುತ್ತೇವೆಂದು ಮುಂದೆ ಬರುವ ತಾಂತ್ರಿಕ ಶಿಕ್ಷಣ ವಿದ್ಯಾರ್ಥಿಗಳಿಗೆ ವಿಶೇಷ ವಿದ್ಯಾರ್ಥಿ ವೇತನವನ್ನು ನೀಡಿದಲ್ಲಿ ಅದು ಪ್ರೋತ್ಸಾಹದಾಯಕ ನಡೆಯಾಗುತ್ತದೆ. ಗುಣಮಟ್ಟದ ತಾಂತ್ರಿಕ ಶಿಕ್ಷಣ ಕನ್ನಡದ ಮೂಲಕವೂ ಲಭ್ಯವಿದೆ ಎನ್ನುವ ಮನಸ್ಥಿತಿಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಬೇಕಾದ್ದು ಸರ್ಕಾರದ ಜವಾಬ್ದಾರಿಯಾಗಿದ್ದು, ಕನ್ನಡದಲ್ಲಿ ಕಲಿಯುವ ಕೀಳರಿಮೆಯನ್ನು ತೊಡೆದುಹಾಕುವಲ್ಲಿ ಸರ್ಕಾರ ವಿಶೇಷ ಪ್ರಯತ್ನ ನಡೆಸಬೇಕಾಗಿದೆ ಎಂದಿರುವ ಬಿಳಿಮಲೆ ಕನ್ನಡದಲ್ಲಿಯೂ ಬೋಧಿಸುವ ಉಪನ್ಯಾಸಕರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕ್ರಮಕ್ಕೆ ಸರ್ಕಾರ ಮುಂದಾದರೆ ಕನ್ನಡದ ಹಿತದೃಷ್ಟಿಯಿಂದ ಹೊಸ ಶಕೆ ಆರಂಭವಾಗಲಿದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು