ಇತ್ತೀಚಿನ ಸುದ್ದಿ
Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2 ದಿನಗಳ ಸಿಲಿಕಾನ್ ಸಿಟಿ ಪ್ರವಾಸ
04/04/2025, 17:20

ಬೆಂಗಳೂರು (reporterkarnataka.com): ಚಿಲಿ ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಅವರು ಎರಡು ದಿನಗಳ ಬೆಂಗಳೂರು ಪ್ರವಾಸ ಹಮ್ಮಿಕೊಂಡಿದ್ದು, ಇಂದು ಮಧ್ಯಾಹ್ನ 12,30 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೂಗುಚ್ಛ ನೀಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಸತ್ಯವತಿ ಜಿ., ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಜಿ., ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಎ.ಬಿ. ಬಸವರಾಜು ಸೇರಿದಂತೆ ಚಿಲಿ ಗಣರಾಜ್ಯದ ಅಧಿಕಾರಿಗಳು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.