11:01 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

Bangaluru | ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ಮೇಲಿನ 40 ಪರ್ಸೆಂಟ್ ಕಮಿಷನ್ ಆರೋಪ: ತನಿಖಾ ಆಯೋಗದಿಂದ ಕ್ಲೀನ್ ಚಿಟ್ ?

04/04/2025, 17:31

ಬೆಂಗಳೂರು(reporterkarnataka.com)ಬಸವರಾಜ ಬೊಮ್ಮಾಯಿ ನೇತೃತ್ವದ ಈ ಹಿಂದಿನ
ಬಿಜೆಪಿ ಸರ್ಕಾರದ ಮೇಲಿನ 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಯಾವುದೇ ಹುರುಳಿಲ್ಲವೆಂದು ತನಿಖಾ ಆಯೋಗ ಕ್ಲೀನ್ ಚಿಟ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದಿನ ಬಿಜೆಪಿ ಸರಕಾರದ ಮೇಲಿನ 40 ಪರ್ಸೆಂಟ್ ಆರೋಪದ ತನಿಖೆಗೆ ನ್ಯಾ. ನಾಗಮೋಹನ್ ದಾಸ್ ಸಮಿತಿ ನೇಮಿಸಿತ್ತು. ಇದೀಗ ತನಿಖಾ ಆಯೋಗ ಸರ್ಕಾರಕ್ಕೆ ವರದಿ ನೀಡಿದ್ದು, ಅದರಲ್ಲಿ ಹಿಂದಿನ ಬಿಜೆಪಿ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಲಾಗಿದೆ ಎನ್ನಲಾಗಿದೆ.
ಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್ ಆರೋಪ ಸಾಬೀತು ಪಡಿಸಲು ಬಲವಾದ ಸಾಕ್ಷ್ಯ ಇಲ್ಲ. ಗುತ್ತಿಗೆದಾರರ ಆರೋಪಗಳಿಗೆ ಯಾವುದೇ ಪುರಾವೆ, ದಾಖಲೆಗಳಿಲ್ಲ, ಗುತ್ತಿಗೆದಾರರು ಕೊಟ್ಟ ದಾಖಲೆ 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಪೂರಕವಾಗಿ ಯಾವುದೇ ಸಾಕ್ಷ್ಯಗಳಿಲ್ಲಎಂದು ವರದಿಯಲ್ಲಿ ಹೇಳಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು