3:15 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

TN BJP | ಎಐಎಡಿಎಂಕೆ ಒತ್ತಡ?: ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ

04/04/2025, 18:02

ಚೆನ್ನೈ(reporterkarnataka.com): ರಾಜಕಾರಣಿಯಾಗಿ ಪರಿವರ್ತನೆಗೊಂಡ ಮಾಜಿ ಪೊಲೀಸ್ ಅಧಿಕಾರಿ ಕೆ.ಅಣ್ಣಾಮಲೈ ಅವರು
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಶುಕ್ರವಾರ ಕೊಯಮತ್ತೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ನಾನು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಲ್ಲ. ಬಿಜೆಪಿ ಅಧ್ಯಕ್ಷರ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ ಎಂದಿದ್ದಾರೆ.
ಬಿಜೆಪಿ ಬೆಳವಣಿಗೆಗಾಗಿ ಅನೇಕ ನಾಯಕರು ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ್ದಾರೆ. ನಾನೂ ಸಹ ಬಿಜೆಪಿಗೆ ಒಳ್ಳೆಯದನ್ನೇ ಬಯಸುತ್ತೇನೆ. ಹಾಗಾಗಿ ಈ ಬಾರಿ ನಾನು ಪಕ್ಷದ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ಇಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ಕೊಡಲ್ಲ ಅಂತ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.
ನಮ್ಮ ಪಕ್ಷ ಇತರ ಪಕ್ಷಗಳಿಗಿಂತ ಭಿನ್ನವಾಗಿದೆ. ಬೇರೆ ಪಕ್ಷಗಳಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ 50 ಜನ ನಾಮಪತ್ರ ಸಲ್ಲಿಸುತ್ತಾರೆ. ಆದರೆ, ನಮ್ಮಲ್ಲಿ ಒಗ್ಗಟ್ಟಿನಿಂದ ಅಧ್ಯಕ್ಷರನ್ನ ಆಯ್ಕೆ ಮಾಡುತ್ತೇವೆ ಅಂತ ಅಣ್ಣಾಮಲೈ ತಿಳಿಸಿದರು.
2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ವಿಭಜನೆಯಾಗಲು ಅಣ್ಣಾಮಲೈ ಕಾರಣ ಎಂಬ ಆರೋಪವಿತ್ತು. ಇದೀಗ ಪಕ್ಷಗಳ ನಡುವಿನ ಮೈತ್ರಿ ಮಾತುಕತೆಗಳು ಚುರುಕುಗೊಂಡಿದೆ. ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ
ಎಐಎಡಿಎಂಕೆ ಒತ್ರಡ ಹೇರುತ್ತಿರುವ ಹಿನ್ನೆಲೆಯಲ್ಲಿ
ಅಣ್ಣಾಮಲೈ ಅವರಿಂದ ರಾಜೀನಾಮೆ ಕೊಡಿಸಲಾಗಿದೆ ಎನ್ನಲಾಗಿದೆ.
ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಖಡಕ್ ಪೊಲೀಸ್ ಅಧಿಕಾರಿ ಎಂದೇ ಖ್ಯಾತರಾಗಿದ್ದರು. ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಸ್ ಪಿಯಾಗಿ ಕಾರ್ಯನಿರ್ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು