ಇತ್ತೀಚಿನ ಸುದ್ದಿ
ಜೈಲ್ ಜಾಮರ್ ನಿಂದ ನೆಟ್ ವರ್ಕ್ ಢಮಾರ್: ನಾಳೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ರಸ್ತೆತಡೆ ಪ್ರತಿಭಟನೆ
04/04/2025, 20:12

ಮಂಗಳೂರು(reporterkarnataka.com): ನಗರದ ಬಿಜೈಯಲ್ಲಿರುವ ಸಬ್
ಜೈಲ್‌ನಲ್ಲಿ ಅವೈಜ್ಞಾನಿಕವಾಗಿ ಅಳವಡಿಸಲಾದ ಜಾಮರ್
ತೆರವುಗೊಳಿಸಲು ಆಗ್ರಹಿಸಿ ಬಿಜೆಪಿ ವತಿಯಿಂದ ಶಾಸಕ ಡಿ. ವೇದವ್ಯಾಸ ಕಾಮತ್ ನೇತೃತ್ವದಲ್ಲಿ ರಸ್ತೆ ತಡೆಯ ಪ್ರತಿಭಟನೆ ಏ. 5ರಂದು ಬೆಳಗ್ಗೆ 11 ಗಂಟೆಗೆ ಜೈಲಿನ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಾಮರ್ ನಿಂದಾಗಿ ಕಳೆದ ಕೆಲವು ವಾರಗಳಿಂದ ಸ್ಥಳೀಯ ನಿವಾಸಿಗಳು, ವ್ಯಾಪಾರಿಗಳು, ಉದ್ಯೋಗಿಗಳಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಕೇವಲ ಭರವಸೆ ಮಾತ್ರ ನೀಡಲಾಗುತ್ತಿದೆ.
ಸದ್ಯ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವಂತೂ ನಾಗರಿಕರು ಬೀದಿಗೆ ಇಳಿಯದಿದ್ದರೆ ಅದೆಂತಹದೇ ಸಮಸ್ಯೆಯಿದ್ದರೂ ಕ್ಯಾರೇ ಎನ್ನುತ್ತಿಲ್ಲ. ಹಾಗಾಗಿ ಸಾರ್ವಜನಿಕರು ಜಾಮರ್ ನಿಂದಾಗಿ ಇಲ್ಲಿ ಅನುಭವಿಸುತ್ತಿರುವ ತೊಂದರೆಯ ವಿರುದ್ಧ ಬೀದಿಗೆ ಇಳಿಯುವುದು ಅನಿವಾರ್ಯವಾಗಿದ್ದು, ರಸ್ತೆ ತಡೆಯ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರ ಪರವಾಗಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಸ್ಥಳೀಯರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಒಗ್ಗೂಡಿ ಭಾಗವಹಿಸುವ ಮೂಲಕ ತಮ್ಮ ಸಹನೆಗೂ ಒಂದು ಮಿತಿ ಇದೆ ಎಂಬುದನ್ನು ಅಧಿಕಾರಶಾಹಿಗಳಿಗೆ ಅರ್ಥ ಮಾಡಿಸಿ ನಿದ್ರೆಯಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಎಚ್ಚರಿಸೋಣ ಎಂದು ಶಾಸಕರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.