1:11 AM Tuesday8 - April 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

Mangaluru | ಪಶುಸಖಿಯರ ಗೌರವಧನ ಹೆಚ್ಚಳಕ್ಕೆ ಯತ್ನ: ಪಶು ಸಂಗೋಪನೆ ಸಚಿವ ವೆಂಕಟೇಶ್

06/04/2025, 10:16

ಮಂಗಳೂರು(reporterkarnataka.com): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶು ವೈದ್ಯಕೀಯ, ಬೀದರ್ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಸಂಯುಕ್ತ ಆಶ್ರಯದಲ್ಲಿ ಮೈತ್ರಿ ಕಾರ್ಯಕರ್ತರ ತರಬೇತಿ ಕಾರ್ಯಕ್ರಮ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ ವೆಂಕಟೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪಶುಸಖಿಯರನ್ನು ಕೇಂದ್ರ ಸರ್ಕಾರದಿಂದ ನೇಮಕ ಮಾಡಲಾಗಿದ್ದು, ಅವರು ಇಲಾಖೆ ಮತ್ತು ರೈತರ ನಡುವೆ ಕೊಂಡಿಯಾಗಿ ಉತ್ತಮ ರೀತಿಯಲ್ಲಿ ಜವಾಬ್ದಾರಿಯುತವಾಗಿ ಉತ್ತಮ ರೀತಿಯಲ್ಲಿ
ಕಾರ್ಯನಿರ್ವಹಿಸುತ್ತಿದ್ದಾರೆ. ಪಶುಸಖಿಯರು ಗ್ರಾಮೀಣ ಪ್ರದೇಶದಲ್ಲಿ ರೈತರ ಮನೆ ಬಾಗಿಲಿಗೆ ಹೋಗಿ ಜಾನುವಾರುಗಳಿಗೆ ಕೃತಕ ಗರ್ಭಧಾರಣೆ ಮತ್ತು ಜಾನುವಾರ ನಿರ್ವಹಣಾ ಸೇವೆಗಳನ್ನು ಮತ್ತು ಮಾಹಿತಿಯನ್ನು ನೀಡುತ್ತಿದ್ದಾರೆ. ಪಶುಸಖಿಯರಿಗೆ ಕಡಿಮೆ ಗೌರವಧನ ನೀಡಲಾಗುತ್ತಿದ್ದು , ಅವರಿಗೆ ಕನಿಷ್ಠ 5000 ರೂ ಗೌರವಧನ ಹೆಚ್ಚಳ ಮಾಡಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲಾಗುತ್ತದೆ ಎಂದು ಅವರು ಹೇಳಿದರು.
ಈ ನಿಟ್ಟಿನಲ್ಲಿ ಪಶು ಸಖಿಯರಿಗೆ ನೀಡುವ ಗೌರವ ಧನದ ಹೆಚ್ಚಳದ ಬಗ್ಗೆ ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟ 3.40 ಲೀಟರ್ ಲಕ್ಷ ಹಾಲು ಉತ್ಪಾದನೆ ಮಾಡುತ್ತಿದ್ದು, ಹೆಚ್ಚುವರಿಯಾಗಿ 1.60 ಲೀ. ಲಕ್ಷ ಹಾಲನ್ನು ಇತರ ಜಿಲ್ಲೆಗಳಿಂದ ಆಮದು ಮಾಡುತ್ತಿದೆ. ಹಾಲು ಉತ್ಪಾದನೆಗಿಂತಲೂ ಖರ್ಚು ಮಾಡಿ ಉತ್ತಮ ಲಾಭಗಳಿಸಿದೆ. ಮೈಸೂರಿನಲ್ಲಿ ಶೇಕಡಾ 40 ರಷ್ಟು ಹಾಲು ಖರ್ಚಾಗುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟ ಉತ್ತಮ ನಿರ್ವಹಣೆ ಮಾಡುತ್ತಿದೆ ಎಂದು ಸಚಿವರು ನುಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ,ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ನಿರ್ದೇಶಕ ಡಾ. ಮಂಜುನಾಥ ಎಸ್ ಪಾಳೇಗಾರ್, ಜಂಟಿ ನಿರ್ದೇಶಕ ಡಾ.ಶಿವಣ್ಣ,ಉಪನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ ಎನ್, ಜಿಲ್ಲಾ ಪಶು ವೈದ್ಯಕೀಯ ಪಾಲಿ ಕ್ಲಿನಿಕ್ ಉಪನಿರ್ದೇಶಕ ಡಾ. ತಮ್ಮಯ್ಯ ಎಬಿ, ಕರ್ನಾಟಕ ಅರೆ ಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಪಶುವೈದ್ಯಾಧಿಕಾರಿಗಳು, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು