6:39 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

Cong Protest | ಕೇಂದ್ರ ಬಿಜೆಪಿ ಸರ್ಕಾರದ ಬೆಲೆಯೇರಿಕೆ: ಯುವ ಕಾಂಗ್ರೆಸ್ ನಿಂದ ಎತ್ತಿನಗಾಡಿಯ ಮೂಲಕ ವಿನೂತನ ಪ್ರತಿಭಟನೆ

08/04/2025, 19:37

ಬೆಂಗಳೂರು(reporterkarnataka.com): ಫೀಡಂಪಾರ್ಕ್ ನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡರವರ ನೇತೃತ್ವದಲ್ಲಿ ವಿನೂತನವಾಗಿ ಎತ್ತಿನಗಾಡಿ ಮೂಲಕ ಬೃಹತ್ ಪ್ರತಿಭಟನೆ ಜರುಗಿತು.


ಯುವ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಹೆಚ್.ಎಸ್.ಮಂಜುನಾಥ್ ಗೌಡರವರು ಮಾತನಾಡಿ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರ ಆದೇಶ ಮೇರೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ಮಾರ್ಗದರ್ಶನದಲ್ಲಿ ಕೇಂದ್ರ ಬಿಜೆಪಿ ಸರ್ಕರದ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ.
ಕೇಂದ್ರ ಬಿಜೆಪಿ ಸರ್ಕಾರ ದೇಶದ 140 ಜನರ ಹೊಟ್ಟೆಯ ಮೇಲೆ ಬರೆ ಏಳೆದಿದ್ದಾರೆ, ಪೆಟ್ರೋಲ್, ಡಿಸೇಲ್ ಮತ್ತು ಎಲ್.ಪಿಜಿ.ಗ್ಯಾಸ್ ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದವರು ಜೀವನ ಸಂಕಷ್ಟಕ್ಕೆ ತಳ್ಳಿದ್ದಾರೆ.
ಉದ್ಯೋಗವಿಲ್ಲ, ನಿರುದ್ಯೋಗ ಸಮಸ್ಯೆ ತಲೆದೋರಿದೆ, ಇದರ ಜೊತೆಯಲ್ಲಿ ಬೆಲೆ ಏರಿಕೆಯಿಂದ ಜನರ ಜೀವನ ನಡೆಸುವುದು ಹೇಗೆ?
ಪ್ರಧಾನಿ ನರೇಂದ್ರ ಮೋದಿರವರ 11ವರ್ಷಗಳ ದುರಾಡಳಿತದಿಂದ ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿದೆ, ಅಚ್ಚೇದೀನ್ ಎಂದರೆ ಇದೇನಾ….?
ಜನಸಾಮಾನ್ಯರ ನೋವಿಗೆ, ಸ್ಪಂದಿಸುವ ಕಾರ್ಯ ಯುವ ಕಾಂಗ್ರೆಸ್ ಮಾಡುತ್ತಿದೆ, ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಯುವ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದು ಹೇಳಿದರು.
ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದಿವ್ಯಾ, ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗೌಡ, ಕೇಂದ್ರ ಜಿಲ್ಲಾ ಯುವ ಕಾಂಗ್ರೆಸ್ ರಂಜೀತ್, ದಕ್ಷ್ಮಿಣ ಜಿಲ್ಲಾ ಮೌನೀಶ್ ರೆಡ್ಡಿ, ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಚೇತನ್ ಕುಮಾರ್, ಶಂಶಾಕ್ ಗೌಡ ರವರು ವಿಧಾನಸಭಾ ಕ್ಷೇತ್ರ ಮತ್ತು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು