8:32 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

Hassan | ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್: ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

09/04/2025, 15:09

ಬೆಂಗಳೂರು(reporterkarnataka.com): ಹಾಸನದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕಾವೇರಿಯಲ್ಲಿ ಅನಾವರಣ ಮಾಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಿಂದ ಇದೇ ಏ.12 ಮತ್ತು 13ರಂದು ಕ್ರೀಡಾಕೂಟವನ್ನು ಸಂಘಟಿಸಿದೆ. ಪ್ರತಿ ಜಿಲ್ಲೆಯ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಎರಡು ದಿನ ಪತ್ರಕರ್ತರ ಕ್ರಿಕೆಟ್ ಕ್ರೀಡಾ ಹಬ್ಬನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಕ್ರೀಡಾಕೂಟ ಯಶಸ್ವಿಯಾಗಲಿ. ಎಲ್ಲರಿಗೂ ಶುಭವಾಗಲಿ ಎಂದು ಶುಭ ಹಾರೈಸಿದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ ನಿಂಬಾಳ್ಕರ್, ಭಾರತೀಯ ಕಾರ್ಯ ನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ರಾಜ್ಯ ಸಮಿತಿ ಸದಸ್ಯ ಸೋಮಶೇಖರಗಾಂಧಿ ಮತ್ತಿತರರು ಹಾಜರಿದ್ದರು.
*ಲಾಂಛನ ವಿಶೇಷ:*
ಕ್ರಿಕೆಟ್ ಕ್ರೀಡಾಕೂಟ ಲಾಂಛನವು, ಹಾಸನ ಜಿಲ್ಲೆಯ ಜೀವನದಿ ಹೇಮಾವತಿ, ಹೊಯ್ಸಳ ಶಿಲ್ಪಕಲೆಯ ತವರೂರು, ಗೊಮ್ಮಟನ ನೆಲೆಬೀಡು ಎನ್ನುವುದನ್ನು ಪ್ರತಿನಿಧಿಸುತ್ತದಲ್ಲದೆ, ಮಲೆನಾಡು, ಅರೆ ಮಲೆನಾಡು, ಬಯಲುಸೀಮೆಯ ಸೊಗಡನ್ನು ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು