1:14 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಮಹಿಳೆಯರು ಮತ್ತು ಯುವಕರು ದೇಶದ ಸಂಸ್ಕೃತಿಯನ್ನು ಉಳಿಸುವ ಶಕ್ತಿಯಾಗಿದ್ದಾರೆ: ಒಡಿಯೂರು ಶ್ರೀ

09/04/2025, 22:51

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಮಹಿಳೆಯರು ಮತ್ತು ಯುವಕರು ದೇಶವನ್ನು ಮತ್ತು ಸಂಸ್ಕೃತಿಯನ್ನು ಉಳಿಸುವ ಶಕ್ತಿಯಾಗಿದ್ದಾರೆ. ರಕ್ತೇಶ್ವರೀ ದೇವಿಯು ವಿದ್ಯೆ, ಬುದ್ದಿ ರಕ್ಷಣೆಯನ್ನು ಕೊಡುವ ದೇವತೆಯಾಗಿದ್ದಾಳೆ ಎಂದು ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಬಿ.ಸಿ.ರೊಡಿನ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕದ ಮುನ್ನಾದಿನ ನಡೆದ ಧಾರ್ಮಿಕ ಸಭೆಯಲ್ಲಿ ಆರ್ಶೀವಚನ ನೀಡಿದರು.

ಯೌವನ ಮತ್ತು ಸಂಪತ್ತು ಸ್ಥಿರವಲ್ಲ. ಇಚ್ಛಾಶಕ್ತಿ ,ಜ್ಞಾನ ಶಕ್ತಿ , ಕ್ರಿಯಾ ಶಕ್ತಿ ಜಾಗೃತವಾಗಬೇಕಾದರೆ ಧರ್ಮ, ಸಂಸ್ಕೃತಿಯಿಂದ ಬದುಕಬೇಕು ಎಂದು ಆಶೀರ್ವಚನ ನೀಡಿದರು.
ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿ ಸೇವಾ ಸಮಿತಿ ಅಧ್ಯಕ್ಷ ಬಿ.ವಿಶ್ವನಾಥ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎರ್ಮಾಳ್ ಕಲ್ಪನಾ ಚಂದ್ರಶೇಖರ್ ಮಾತನಾಡಿದರು.
ಸೇವಾ ಸಮಿತಿಯ ಸದಸ್ಯ ಎಂ. ಅಶ್ವನಿ ಕುಮಾರ್ ರೈ ಸಾಗತಿಸಿ ಪ್ರಸ್ತಾವನೆ ಗೈದರು. ಉಪಾಧ್ಯಕ್ಷ ಸಂಜೀವ ಪೂಜಾರಿ, ಕೋಶಾಧಿಕಾರಿ ಬಿ. ಮೋಹನ್, ಬ್ರಹ್ಮ ಕಲಶೋತ್ಸವ ಸಮಿತಿಯ ಕೋಶಾಧಿಕಾರಿ ಕೆ. ನಾರಾಯಣ ಹೆಗ್ಡೆ, ಸಹಕೋಶಾಧಿಕಾರಿ ಕೆ. ವಸಂತ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪ್ರಧಾನ ಅರ್ಚಕರಾದ ರಘುಪತಿ ಭಟ್ ಹಾಗೂ ಜೀರ್ಣೋದ್ಧಾರ ಮತ್ತು ಬ್ರಹ್ಮ ಕಲಶೋತ್ಸವ ಕಾರ್ಯದಲ್ಲಿ ತೊಡಗಿಸಿಕೊಂಡ ಪ್ರಮುಖರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಕಾರ್ಯದರ್ಶಿ ಐತ್ತಪ್ಪ ಪೂಜಾರಿ ವಂದಿಸಿದರು. ಎಚ್. ಕೆ. ನಯನಾಡು ನಿರೂಪಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪುತ್ತೂರು
ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ ವಿದುಷಿ ರೋಹಿಣಿ ಉದಯ್ ಶಿಷ್ಯೆಯರಿಂದ ನೃತ್ಯ ರಂಜಿನಿ, ಕಲ್ಲಡ್ಕ ಕಲಾನಿಕೇತನ ಡ್ಯಾನ್ಸ್ ಪೌಂಡೇಶನ್ ನ ವಿದುಷಿ ವಿದ್ಯಾಮನೋಜ್ ಅವರ ಶಿಷ್ಯರಿಂದ ನೃತ್ಯ ಸಿಂಚನ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು