5:58 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Puttur | ಮುಳಿಯ ಜುವೆಲ್ಸ್ ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್: ಹೊಸ ಲೋಗೋ ಅನಾವರಣ

10/04/2025, 18:34

ಪುತ್ತೂರು(reporterkarnataka.com): ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ.
ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು.
ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ.
“ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ.
ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯ ವಿಶೇಷ. ಈ ಹೊಸ ಲೋಗೋ ಆಧುನಿಕತೆಯನ್ನು ಮತ್ತು ಡಿಸೈನ್ ಎಲಿಮೆಂಟ್ ಹೊಂದಿದ್ದು ಹೊಸ ಟ್ರೆಂಡ್ ಗಳನ್ನು ಹೊರ ಸೂಸುತ್ತದೆ. ನಂಬಿಕೆ ಮತ್ತು ಪರಂಪರೆಯ ಜೊತೆಗೆ ಮುಳಿಯದ mascot ಆಗಿರುವ ಆನೆ ಮರಿ ದೃಢತೆ ಮತ್ತು ನಾಯಕತ್ವ ಮತ್ತು ಎಗ್ರೆಸಿವ್ ವಿಚಾರಗಳನ್ನು ಮುಂದಿಡುತ್ತದೆ” ಶುದ್ಧತೆ ಮೀರಿದ ಪರಿಪೂರ್ಣತೆ ಯೆಡೆಗೆ ಸಾಗಿ ಬಂದು ಮುಳಿಯ ತನ್ನ ಸುತ್ತಮುತ್ತ ಸಂತೋಷ ಉಣ ಬಡಿಸಿದೆ ಎನ್ನುತ್ತಾರೆ ಕೇಶವ ಪ್ರಸಾದ್ ಮುಳಿಯ.
ಕಳೆದ ಮೂರು ತಲೆಮಾರುಗಳಿಂದ ಗ್ರಾಹಕರ ಮತ್ತು ಜನತೆಯ ವಿಶ್ವಾಸ ಗಳಿಸಿ – ಉಳಿಸುತ್ತಿರುವುದು ನಮ್ಮ ಮುಳಿಯ ಪರಂಪರೆ. ಜನರಿಗೆ ಚಿನ್ನದೊಂದಿಗೆ ಸಂತೃಪ್ತಿ,- ಸಂತೋಷ ನೀಡಿದ್ದೇವೆ.. ನೀವು ಮನಸಾರೆ ನಮ್ಮನ್ನು ಹರಸಿದ್ದೀರಿ.. Creating happiness (ಸದಾ ಸಂತೋಷ ) ನೀಡುವ ನಮ್ಮ ಹೊಸತನಗಳು ಮುಂದಿನ ದಿನಗಳಲ್ಲಿ ಇನ್ನಷ್ಟು, ಮತ್ತಷ್ಟು ಹೊಸತನದೊಂದಿಗೆ ಬರುತ್ತಿದ್ದೇವೆ” ಎನ್ನುತ್ತಾರೆ ಕೃಷ್ಣ ನಾರಾಯಣ ಮುಳಿಯ.

“ಈ ಹೊಸ ಲೋಗೋವನ್ನು ಪುತ್ತೂರಿನ ಸಾಫ್ಟ್ವೇರ್ ಕಂಪನಿ ಯಾದ ” ದ ವೆಬ್ ಪೀಪಲ್ “ಮಾಡಿರುತ್ತದೆ” ಎಂದು ಮುಳಿಯ ಸಂಸ್ಥೆಯ ಬ್ರಾಂಡ್ ಮತ್ತು ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಈ ಸಂದರ್ಭದಲ್ಲಿ ಲೋಗೋದ ವಿನ್ಯಾಸದ ಕುರಿತು ವಿವರಿಸಿದರು. ಸಂಸ್ಥೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಸಂಜೀವ ಹಾಗೂ ದ ವೆಬ್ ಪೀಪಲ್ ಪಾಲುದಾರರಾದ ಆದಿತ್ಯ ಕಲ್ಲುರಾಯ ಮತ್ತು ಶರತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು