6:30 AM Wednesday19 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ: ಮೆಟ್ರೋ ಮಾದರಿಯ ಸಂಚಾರಿ ವ್ಯವಸ್ಥೆ

12/04/2025, 14:55

*ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ*

*ಸ್ವಿಜ್ಡರ್ಲ್ಯಾಂಡ್ ಹೋಗಿ ಯೋಜನೆಯ ಪ್ರಾಯೋಗಿಕ ಯಶಸ್ಸನ್ನು ಅಧ್ಯಯನ ನಡೆಸಿದ್ದ ಸಚಿವ ಸಂತೋಷ್ ಲಾಡ್*

*ಮುಖ್ಯಮಂತ್ರಿಗಳಿಗೆ ಉದ್ದೇಶಿತ ಯೋಜನೆಯ ಸಾಧ್ಯಾ ಸಾಧ್ಯತೆಗಳನ್ನು, ಅವಕಾಶಗಳನ್ನು ವಿವರಿಸಿದ ಸಚಿವ ಸಂತೋಷ್ ಲಾಡ್*

ಬೆಂಗಳೂರು(reporterkarnataka.com): ಹುಬ್ಬಳ್ಳಿ- ಧಾರವಾಡದಲ್ಲಿ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕಾವೇರಿಯಲ್ಲಿ ನಡೆದ ಸಭೆಯ ಇತರೆ ಮುಖ್ಯಾಂಶಗಳು:

•ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು.

•ಯೋಜನೆ ಅನುಷ್ಠಾನ ಕುರಿತು ಮೂರು ತಿಂಗಳ ಒಳಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

•ಇದು ಸಂಪೂರ್ಣ ವಿದ್ಯುತ್ ಚಾಲಿತ ವ್ಯವಸ್ಥೆಯಾಗಿದ್ದು ನಗರದಲ್ಲಿ ಎತ್ತರಿಸಿದ ರಸ್ತೆ ಹಾಗೂ ಇತರೆಡೆ ನೆಲದ ಮೇಲೆ ಸಂಚರಿಸಲಿದೆ. ಇದರಲ್ಲಿ 250 ಜನರು ಒಮ್ಮೆಗೆ ಪ್ರಯಾಣಿಸಬಹುದಾಗಿದೆ. ಕಳೆದ ಒಂದು ವರ್ಷದಿಂದ ಯೋಜನೆ ಕಾರ್ಯ ಸಾಧ್ಯತೆ ಬಗ್ಗೆ ಅಧ್ಯಯನ ನಡೆಸಲಾಗಿದೆ.

•ಮೆಟ್ರೋ ಮಾದರಿಯ ಈ ಸಂಚಾರಿ ವ್ಯವಸ್ಥೆ ಯುರೋಪಿನ ಹಲವು ರಾಷ್ಟ್ರಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಸಂಸ್ಥೆಗಳ ಪ್ರತಿನಿಧಿಗಳು ಮಾಹಿತಿ ನೀಡಿದರು.

•ಹುಬ್ಬಳ್ಳಿ ಧಾರವಾಡದಲ್ಲಿ ಈ ಯೋಜನೆ ಯಶಸ್ವಿಯಾದರೆ, ರಾಜ್ಯದ ಇತರ ಎರಡನೇ ಹಂತದ ನಗರಗಳಿಗೂ ಇದನ್ನು ವಿಸ್ತರಿಸಬಹುದಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.


•ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಮಾಜ ಕಲ್ಯಾಣ ಸಚಿವ ಮಹಾದೇವಪ್ಪ, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಇಎಸ್ಎಸ್ ಎಜಿ ಸಂಸ್ಥೆಯ ಸುಸಾನ್ ವಾನ್ ಸುರಿ, ಎಸ್ಎಸ್ಬಿ ಸಂಸ್ಥೆಯ ನಿರ್ದೇಶಕ ಬುರಾಕ್ ಸೆನಸರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು