2:51 PM Wednesday22 - April 2026
ಬ್ರೇಕಿಂಗ್ ನ್ಯೂಸ್
ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ…

ಇತ್ತೀಚಿನ ಸುದ್ದಿ

Suratkal | ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೆ ಸೂಚನೆ: ಗುರುಪುರ ಕಂಬಳೋತ್ಸವದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್

13/04/2025, 20:16

ಸುರತ್ಕಲ್(reporterkarnataka.com): ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವಂತೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಅವರು ಶನಿವಾರ ಸಂಜೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಗುರುಪುರ ಮಾಣಿಬೆಟ್ಟು ಗುತ್ತಿನ ಗದ್ದೆಯಲ್ಲಿ ನಡೆದ ಎರಡನೇ ವರ್ಷದ ಹೊನಲು ಬೆಳಕಿನ ಮೂಳೂರು – ಅಡ್ಡೂರು ಜೋಡುಕರೆ ಕಂಬಳ “ಗುರುಪುರ ಕಂಬಳೋತ್ಸವ”ದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತಾಡಿದರು.


ದ.ಕ. ಜಿಲ್ಲೆ ವಿದ್ಯಾವಂತರು, ಬುದ್ದಿವಂತರ ಜಿಲ್ಲೆಯಾಗಿದ್ದು ಅವರ ಬುದ್ದಿವಂತಿಗೆ, ಪ್ರತಿಭೆಗಳು ಹೊರ ದೇಶಗಳಿಗೆ ಬಳಕೆಯಾಗುತ್ತಿದೆ. ಅದನ್ನು ನಮ್ಮ ರಾಜ್ಯದಲ್ಲೇ ಬಳಸಿಕೊಳ್ಳುವಂತೆ ಯೋಜನೆಗಳನ್ನು ರೂಪಿಸಲಾಗುವುದು.
ಕರಾವಳಿಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಜಾತಿ ಧರ್ಮಗಳನ್ನು ಮರೆರು ಕಂಬಳ‌ ನಡೆಸಿ ಬೆಳೆಸಲು ಸರಕಾರ‌ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
*ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರ, ಪ್ರವಾಸೋದ್ಯಮ ಬೆಳೆಸಲು ಸೂಚನೆ:*
ದೇಶದಲ್ಲೇ ಅತೀ ಹೆಚ್ಚಿನ ಕರಾವಳಿ ಭೂಭಾಗ ದ.ಕ. ಜಿಲ್ಲೆಯಲ್ಲಿದ್ದು ಅದನ್ನು ಬಳಸಿಕೊಂಡು ಧಾರ್ಮಿಕ ಕ್ಷೇತ್ರ ಮತ್ತು ಪ್ರವಾಸೋದ್ಯಮವನ್ನು ಬೆಳಸುವ ಕುರಿತು ಈಗಾಗಲೇ ಸರಕಾರ ಮಟ್ಟದಲ್ಲಿ ಚರ್ಚಿಸಲಾಗಿದೆ. ಇದರಿಂದ ಪ್ರವಾಸೋದ್ಯಮ ಬೆಳೆಯುವ ಜೊತೆಗೆ ಕರಾವಳಿಯ ಸಂಸ್ಕೃತಿಯನ್ನು ಬೆಳೆಸುವ ಕುರಿತು ಸರಕಾರ ಒತ್ತು ನೀಡಲು ಸರಕಾರ‌ ಮುಂದಾಗಿದ್ದು, ಅದಕ್ಕಾಗಿ ಸರಕಾರ ಎಂದಿಗೂ ಜಿಲ್ಲೆಯ ಜನರೊಂದಿಗೆ ಇರಲಿದೆ ಎಂದು ಉಪ‌ಮುಖ್ಯಮಂತ್ರಿ ಡಿ.ಕೆ.‌ ಶಿವಕುಮಾರ್ ನುಡಿದರು.
“ಗುರುಪುರ ಕಂಬಳೋತ್ಸವ ಸಮಿತಿಯ ಅಧ್ಯಕ್ಷ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾತಾಡಿ, ಕಂಬಳ ದಕ್ಷಿಣ ಕನ್ನಡ ಜಿಲ್ಲೆಯ ಸಂಸ್ಕೃತಿ, ಜಾನಪದ ಕ್ರೀಡೆಯಾಗಿರದೆ ನಮ್ಮ ಸಂಸ್ಕೃತಿಯಾಗಿದೆ. ತಲಪಾಡಿಯಿಂದ ಮುಲ್ಕಿ ವರೆಗಿನ ಬೀಚ್ ರಸ್ತೆ ಗಳನ್ನು ಅಭಿವೃದ್ಧಿ ಪಡಿಸಿ ಬೀಚ್ ಪ್ರಾವಾಸೋದ್ಯಮಕ್ಕೆ ಒತ್ತು ನೀಡಬೇಕು ಎಂದು ಮನವಿ ಮಾಡಿದರು.
ಕಂಬಳ ಸಮಿತಿಯ ವತಿಯಿಂದ ನೇಗಿಲು ಹಸ್ತಾಂತರಿಸಿ ಉಪಮುಖ್ಯಮಂತ್ರಿ ಅವರನ್ನು ಸನ್ಮಾನಿಸಲಾಯಿತು. ಕಂಬಳ‌ ಕ್ಷೇತ್ರದಲ್ಲಿ ವಿಶೇಷ ಸಾಧನೆ ತೋರಿದ ದೂಜ ಕೊಣವನ್ನು ಡಿಕೆಶಿ ಸನ್ಮಾನಿಸಿ ಅದರ ಪೋಸ್ಟಲ್ ಸ್ಟಾಂಪ್ ಬಿಡುಗಡೆ ಗೊಳಿಸಿದರು.
ಕಂಬಳ ಕ್ಷೇತ್ರದ ಗುಣಪಾಲ ಕಡಂಬ ಪ್ರಾಸ್ತಾವಿಕ ಮಾತನಾಡಿದರು. ಸಮಾರೋಪ ಸಮಾರಂಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಅದ್ಯಕ್ಷ ರಾಜೇಂದ್ರ‌ ಕುಮಾರ್, ಮಾಜಿ ಸಚಿವರಾಗಿರುವ ರಮಾನಾಥ ರೈ, ಅಭಯಚಂದ್ರಜೈನ್, ವಿನಯ ಕುಮಾರ್ ಸೊರಕೆ, ವಿ.ಪ. ಸದಸ್ಯ ಐವನ್ ಡಿಸೋಜ, ಪದ್ಮರಾಜ್ ಪೂಜಾರಿ, ಶಕುಂತಲಾ ಶೆಟ್ಟಿ ಪುತ್ತೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ರಕ್ಷಿತ್ ಶಿವರಾಮ, ಮಮತಾ ಗಟ್ಟಿ, ಕಣಚೂರು ಮೋನು, ದೇವಿ ಪ್ರಸಾದ್ ಶೆಟ್ಟಿ ಮೊದಲಾದವರು ಇದ್ದರು.

ಕಂಬಳ ಜಾತಿ ಧರ್ಮಗಳ ವಿಚಾರ ಅಲ್ಲ. ಹಿರಿಯರ ಸಂಪ್ರದಾಯ. ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ
ಜಿಲ್ಲೆಯ ಸಾಂಸ್ಕೃತಿಕ ಕ್ರೀಡೆ ಕಂಬಳ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಬೇಕಿದೆ. ಪ್ರಾಣಿಗಳ ಮನಸು ಅರಿತು ಅವುಗಳ ಮೇಲೆ ಹಿಡಿತ ಸಾಧಿಸಿ ಸೋಲುವುದನ್ನು ಕಲಿಯದಿದ್ದರೆ ಗೆಲುವು ಅಸಾಧ್ಯ. ಕ್ರೀಡೆಯಲ್ಲಿ ಹೃದಯವಂತಿಕೆ ಮುಖ್ಯ.ಕಂಬಳದ ಮೂಲಕ ಜಿಲ್ಲೆಯ ಸಂಸ್ಕೃತಿ ಉಳಿಸುವ ಕೆಲಸ ಇನಾಯತ್ ಅಲಿ ನೇತೃತ್ವದಲ್ಲಿ ನಡೆಯುತ್ತಿದೆ.


– ಡಿ.ಕೆ.ಶಿವಕುಮಾರ್
ಉಪ ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಜಾಹೀರಾತು