3:26 PM Monday29 - June 2026
ಬ್ರೇಕಿಂಗ್ ನ್ಯೂಸ್
ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್

ಇತ್ತೀಚಿನ ಸುದ್ದಿ

Chikkamagaluru | ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

15/04/2025, 12:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕು ಬಣಕಲ್ ಹೋಬಳಿಯ ಕೊಟ್ಟಿಗೆಹಾರ್ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏಪ್ರಿಲ್ 12.ರಂದು ಸಂಜೆ 6 ಗಂಟೆಯ ಸುಮಾರಿಗೆ ಅಜಾದ್ ನಗರದಲ್ಲಿ ಈ ದುಷ್ಕೃತ್ಯ ನಡೆದಿದೆ. ಈ ಬಗ್ಗೆ ಆದಿಕರ್ನಾಟಕ ಸಮುದಾಯಕ್ಕೆ ಸೇರಿದ ಸಂತ್ರಸ್ತ ಮಹಿಳೆ ಸುರೇಖಾ (38) ಎಂಬವರು ಏ. 13ರಂದು ರಾತ್ರಿ 11 ಗಂಟೆಗೆ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ಭೇಟಿ ನೀಡಿ ದೂರು ನೀಡಿದ್ದರು.
ದೂರಿನ ವಿವರಗಳ ಪ್ರಕಾರ, ಆಕೆಯು ಮನೆಯಲ್ಲಿ ಒಬ್ಬಳೇ ಇದ್ದಾಗ, ರಾಮನಗರದ ಅಬ್ಬಾಸ್ ಎಂಬ ವ್ಯಕ್ತಿ ಮನೆಗೆ ಬಂದು ವಾಹನದ ಬಾಡಿಗೆ ಬಾಕಿ ಹಣ 700 ರೂ. ತಕ್ಷಣ ನೀಡುವಂತೆ ಒತ್ತಾಯಿಸಿದ್ದ. ಹಣ ಇಲ್ಲವೆಂದಾಗ, “ಹಣ ಬೇಡ, ನನ್ನ ಜೊತೆ ಮಲಗಿಕೋ” ಎಂದು ಹೇಳಿ ಆಕೆಯ ಬಲಗೈ ಹಿಡಿದು ಎಳೆಯುವ ಪ್ರಯತ್ನ ನಡೆಸಿದ್ದ. ಮಹಿಳೆ ತಪ್ಪಿಸಿಕೊಂಡು ಓಡಿದಾಗ ಆಕೆಯ ಕೂದಲನ್ನು ಹಿಡಿದು ಹೊಟ್ಟೆ ಹಾಗೂ ಸೊಂಟಕ್ಕೆ ಲಾತಿಯಿಂದ ಬಡಿದು ತಳ್ಳಿ ಕೆಳಗೆ ಬೀಳಿಸಿದ್ದಾನೆ. ನಂತರ ಮಹಿಳೆ ತನ್ನ ಮಗಳನ್ನು ಕರೆಸಿದಾಗ, ಮನೆಗೆ ಬಂದ ಮಗಳನ್ನು ಕೂಡ ದೈಹಿಕವಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಐಪಿಸಿ ಕಲಂಗಳು 329(4), 74, 75, 115(2), 352, 351(2)(3) ಹಾಗೂ ಎಸ್‌ಸಿ/ಎಸ್‌ಟಿ (ಅತ್ಯಾಚಾರ ನಿರೋಧಕ) ಕಾಯ್ದೆಯ 3(1)(w), 3(2)(va) ರ ಅಂಗವಾಗಿ ಬಣಕಲ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 0026/2025ರಂತೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು