11:43 AM Wednesday16 - April 2025
ಬ್ರೇಕಿಂಗ್ ನ್ಯೂಸ್
ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ…

ಇತ್ತೀಚಿನ ಸುದ್ದಿ

German | ಎಐ, ಕ್ವಾಂಟಂ, ಸೈಬರ್ ಸೆಕ್ಯುರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ

16/04/2025, 00:05

ಬೆಂಗಳೂರು(reporterkarnataka.com): ಎಐ, ಕ್ವಾಂಟಂ ತಂತ್ರಜ್ಞಾನ, ಬಿಟಿ, ಸ್ಮಾರ್ಟ್ ಸಿಟಿ, ಉನ್ನತ ಶಿಕ್ಷಣ ಮತ್ತು ಸುಸ್ಥಿರ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಉದ್ದೇಶದಿಂದ ಜರ್ಮನಿಯ ಬವೇರಿಯಾ ಪ್ರಾಂತ್ಯ ಮತ್ತು ರಾಜ್ಯ ಸರಕಾರಗಳು ವಿಧಾನ ಸೌಧದಲ್ಲಿ ಒಡಂಬಡಿಕೆಗೆ ಅಂಕಿತ ಹಾಕಿದವು.
ರಾಜ್ಯ ಸರಕಾರದ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮತ್ತು ಬವೇರಿಯಾ ಪರವಾಗಿ ಅಲ್ಲಿಯ ಚಾನ್ಸಲರಿ ಮುಖ್ಯಸ್ಥ ಡಾ.ಪ್ಲೋರಿಯನ್ ಹರ್ಮನ್ ಸಹಿ ಹಾಕಿದರು. ಈ ಸಂದರ್ಭದಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, `ಈ ಒಡಂಬಡಿಕೆಯು ಮುಂದಿನ 5 ವರ್ಷಗಳ ಕಾಲ ಚಾಲ್ತಿಯಲ್ಲಿರುತ್ತದೆ. ಇದರ ಅನ್ವಯ ಇಂಡಸ್ಟ್ರಿ 4.0, ವೈಮಾಂತರಿಕ್ಷ, ವೈದ್ಯಕೀಯ ತಂತ್ರಜ್ಞಾನ, ಪರಿಸರ ತಂತ್ರಜ್ಞಾನ, ನಗರ ಮೂಲಸೌಕರ್ಯ, ಕೌಶಲ್ಯಾಭಿವೃದ್ಧಿ ಮತ್ತು ನೇಮಕ, ಉದ್ಯಮಶೀಲತೆ, ಸೈಬರ್ ಸೆಕ್ಯುರಿಟಿ ಕ್ಷೇತ್ರಗಳಲ್ಲೂ ಪರಸ್ಪರ ಸಹಕಾರ ಸ್ಥಾಪನೆಯಾಗಲಿದೆ’ ಎಂದಿದ್ದಾರೆ.
ಬವೇರಿಯಾದ ಸಚಿವರಿಗೆ ರಾಜ್ಯದ ಕೈಗಾರಿಕಾ ಕಾರ್ಯಪರಿಸರದ ಬಗ್ಗೆ ಸಾದ್ಯಂತವಾಗಿ ತಿಳಿಸಿ, ಹೂಡಿಕೆಗೆ ಅವಕಾಶವಿರುವ ಕ್ಷೇತ್ರಗಳತ್ತ ಗಮನ ಸೆಳೆಯಲಾಯಿತು. ಜತೆಗೆ ಕೌಶಲ್ಯಾಭಿವೃದ್ಧಿಯಂಥ ನಿರ್ದಿಷ್ಟ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ವರ್ಕಿಂಗ್ ಗ್ರೂಪ್ ರಚಿಸುವ ಬಗ್ಗೆ ತೀರ್ಮಾನಿಸಲಾಯಿತು. ಬವೇರಿಯಾ ಪ್ರಾಂತ್ಯವು 2007ರಿಂದಲೂ ರಾಜ್ಯದೊಂದಿಗೆ ವಾಣಿಜ್ಯ ಸಂಬಂಧವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಬವೇರಿಯಾ ಪ್ರಾಂತೀಯ ಸರಕಾರದ ಪ್ರತಿನಿಧಿ ಮಟ್ಟದ ಕಚೇರಿ 2001ರಿಂದಲೂ ಕಾರ್ಯ ನಿರ್ವಹಿಸುತ್ತಿದೆ. ಈಗಿನ ಹೊಸ ಒಡಂಬಡಿಕೆಯಿಂದ ರಾಜ್ಯ ಮತ್ತು ಬವೇರಿಯಾ ನಡುವಿನ ಬಾಂಧವ್ಯ ಮತ್ತೊಂದು ಮಜಲನ್ನು ಕಾಣಲಿದೆ. ವಿಜ್ಞಾನ ಮತ್ತು ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ 2013ರಿಂದಲೂ ದ್ವಿಪಕ್ಷೀಯ ಸಹಕಾರವಿದೆ. ಇನ್ನು ಮುಂದೆ ಬಾಹ್ಯಾಕಾಶ, ಎಲೆಕ್ಟ್ರಾನಿಕ್ಸ್ ಮತ್ತು ರಕ್ಷಣಾ ವಲಯಗಳ ಬಗ್ಗೆ ಗಮನ ಹರಿಸಲು ಹೆಚ್ಚಿನ ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.


ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, `ರಾಜ್ಯದ ಐಟಿ-ಬಿಟಿ ಇಲಾಖೆಯು ನವೋದ್ಯಮ ಕ್ಷೇತ್ರದಲ್ಲಿ ಜರ್ಮನಿಯೊಂದಿಗೆ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಸಂಶೋಧನೆ, ಯೂನಿಕಾರ್ನ್ ಶ್ರೇಣಿಯ ನವೋದ್ಯಮಗಳು ಸಮೃದ್ಧವಾಗಿವೆ. ಯಾವುದಾದರೂ ವಲಯದಲ್ಲಿ ರಾಜ್ಯದ ಯುವಜನರು ಜರ್ಮನ್ ಭಾಷೆ ಕಲಿಯುವುದು ಅಗತ್ಯವೆನಿಸಿದರೆ ಅದಕ್ಕೂ ವ್ಯವಸ್ಥೆ ಮಾಡಲಾಗುವುದು. ಬವೇರಿಯಾ ಪ್ರಾಂತೀಯ ಸರಕಾರವು ಈ ಬಗ್ಗೆ ನಮ್ಮ ಗಮನಕ್ಕೆ ತರಬಹುದು’ ಎಂದಿದ್ದಾರೆ.
ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸತ್ಯವತಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು