5:32 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Mangaluru | ಸೋನಿಯಾ, ರಾಹುಲ್ ವಿರುದ್ದ ದೋಷಾರೋಪ ಪಟ್ಟಿ: ಕಾಂಗ್ರೆಸ್ ನಿಂದ ಮಂಗಳೂರು ಇಡಿ ಕಚೇರಿಗೆ ಮುತ್ತಿಗೆ ಯತ್ನ

16/04/2025, 20:10

ಮಂಗಳೂರು(reporterkarnataka.com):ನ್ಯಾಶನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮತ್ತಿತರ ನಾಯಕರ ವಿರುದ್ಧ ಇಡಿ ಸುಳ್ಳು ಆರೋಪ ಹೊರಿಸಿ ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ನಗರದ ಯೆಯ್ಯಾಡಿಯಲ್ಲಿರುವ ಇಡಿ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರ, ಅಮಿತ್‌ ಶಾ, ಇಡಿ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿದರು. ಬಳಿಕ ಗೃಹ ಸಚಿವ ಅಮಿತ್‌ ಶಾ ಭಾವಚಿತ್ರವನ್ನು ಸುಟ್ಟು ಪ್ರತಿಭಟಿಸಿದರು.


ಬಳಿಕ ಆಕ್ರೋಶಗೊಂಡ ಪ್ರತಿಭಟನಾಕಾರರು ಇಡಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರೂ ಅಲ್ಲಿದ್ದ ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ.
ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ದಬ್ಬಾಳಿಕೆ ನಡೆಸಲು ಹೊರಟಿದೆ, ಅದಕ್ಕೆ ಕಾಂಗ್ರೆಸ್ ದೇಶವ್ಯಾಪಿ ಹೋರಾಟ ಮಾಡುವ ಮೂಲಕ ತಕ್ಕ ಉತ್ತರ ಕೊಟ್ಟಿದ್ದೇವೆ. ಈ ಹಿಂದೆಯೂ ಇಡಿ ಮೂಲಕ ದಾಳಿ ಮಾಡಿಸಿ ಬಿಜೆಪಿಯೇತರ ನಾಯಕರನ್ನು ಹೆದರಿಸುವ ಕೆಲಸ ಮಾಡಿತ್ತು. ಯಾರು ಇಡಿ ಮೇಲೆ ಭಯಪಟ್ಟು ಬಿಜೆಪಿ ಸೇರಿದ್ದಾರೋ ಅವರ ಮೇಲಿನ ಎಲ್ಲ ಕೇಸ್‌‌ಗಳನ್ನು ಮುಚ್ಚಿ ಹಾಕಲಾಗಿದೆ. ಇಡಿ ದಾಳಿಯ ಭೀತಿಯಿಂದ ಬಿಜೆಪಿ ಸೇರಿದವರು ವಾಷಿಂಗ್ ಮಿಷಿನ್‌ಗೆ ಹಾಕಿದಂತೆ ಸ್ವಚ್ಛ ಆಗುತ್ತಾರೆ ಎಂದು ಲೇವಡಿ ಮಾಡಿದರು.
*ಪ್ರಾಣ ಕೊಡಲೂ ಸಿದ್ಧ:*
ಕೇಂದ್ರ ಸರ್ಕಾರ ಇಡಿ ಎದುರಿಗಿಟ್ಟು ರಾಜಕೀಯ ನಡೆಸುತ್ತಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರ ಮೇಲೆ ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿರುವುದು ಸಂಪೂರ್ಣ ರಾಜಕೀಯ ಪ್ರೇರಿತ. ಇದರ ವಿರುದ್ಧ ನಾವು ಬೀದಿಗಿಳಿದು ಹೋರಾಟ ನಡೆಸಲಿದ್ದೇವೆ. ಅಗತ್ಯ ಬಿದ್ದರೆ ಪ್ರಾಣ ಕೊಡಲೂ ಸಿದ್ಧ ಎಂದು ರಮಾನಾಥ ರೈ ಗುಡುಗಿದರು.
ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಮಾತನಾಡಿ, ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿರುವುದು ಖಂಡನೀಯ. ಇದರ ವಿರುದ್ಧ ನಿರಂತರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ಕಾಂಗ್ರೆಸ್‌ ಮುಖಂಡರಾದ ಭರತ್‌ ಮುಂಡೋಡಿ, ಟಿ ಹೊನ್ನಯ್ಯ, ಬ್ಲಾಕ್ ಅಧ್ಯಕ್ಷರಾದ ಜೆ. ಅಬ್ದುಲ್ ಸಲೀಮ್, ಪ್ರಕಾಶ್ ಸಾಲಿಯಾನ್, ಪದ್ಮನಾಭ ಪೂಜಾರಿ ವಿಟ್ಲ, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರು ಮನೋಹರ್ ರಾಜೀವ್, ನಾರಾಯಣ್ ನಾಯಕ್, ಲಾರೆನ್ಸ್ ಡಿ ಸೋಜಾ, ಅಲಿಸ್ಟರ್ ಡಿ ಕುನ್ನಾ, ಪ್ರದೀಪ್ ರೈ ಪಾಂಬರ್ ಪುತ್ತೂರು, ಉಷಾ ಅಂಚನ್ ಕಡಬ, ವಿಜಯ ಕುಮಾರ್ ಸೊರಕೆ, ಕಿರಣ್ ಬುಡ್ಲೆಗುತ್ತು ಸುಳ್ಯ, ಶುಭೋದಯ ಆಳ್ವ, ಟಿ.ಕೆ. ಸುಧೀರ್‌, ಎಂ. ಪಿ. ಮನುರಾಜ್‌, ನೀರಜ್‌ಪಾಲ್‌, ನಝೀರ್‌ ಬಜಾಲ್‌, ಪಿ ಎಸ್ ಗಂಗಾಧರ್ ಸುಳ್ಯ, ಗೀತಾ ಅತ್ತಾವರ, ಮಹೇಶ್ ರೈ ಕಾವು ಪುತ್ತೂರು, ಸುರೇಶ್ ನಾವೂರ್, ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಅಧ್ಯಕ್ಷ ಸದಾನಂದ ಮಾವಜಿ ಸುಳ್ಯ, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಚೇತನ್ ಕುಮಾರ್ ಅಶೋಕ್ ನಗರ, ರಾಹುಲ್ ಅದಪಾಂಗಯ ಸುಳ್ಯ, ಸೋಹಾನ್ ಎಸ್ ಕೆ, ಸಬೀರ್ ಎಸ್, ಶಕುಂತಲಾ
ಕಾಮತ್, ಅನಸ್ ವಿಟ್ಲ ಮತ್ತಿತರರಿದ್ದರು.
ಕೊನೆಗೆ ಮಾಜಿ ಮೇಯರ್ ಶಶಿಧರ್ ಹೆಗ್ಡೆ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು