6:55 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

CM | ಸೋನಿಯಾ, ರಾಹುಲ್ ವಿರುದ್ದ ದೋಷಾರೋಪ ಪಟ್ಟಿ ಮೋದಿ- ಶಾ ಸೇಡಿನ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

16/04/2025, 16:43

ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ. ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ ಎಂದು ಅವರು ಹೇಳಿದ್ದಾರೆ.
ಸ್ವಾಯತ್ತ ತನಿಖಾ ಸಂಸ್ಥೆಯಾದ ಇಡಿಯನ್ನು ವಿರೋಧ ಪಕ್ಷದ ನಾಯಕರ ವಿರುದ್ಧ ದ್ವೇಷ ಸಾಧಿಸಲು ಆಯುಧವನ್ನಾಗಿ ಬಳಸುತ್ತಾ ಬಂದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಾಗಿರುವ ಸುಳ್ಳು ಆರೋಪವನ್ನು ಬಳಸಿಕೊಂಡಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದಂತೆಯೇ ಈ ದ್ವೇಷದ ರಾಜಕಾರಣ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ.

ವಿಚಾರಣೆಯ ನೆಪದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖ ನಾಯಕರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಪೀಡಿಸಿದ ಇಡಿ ಯು ಅದರಿಂದ ಯಾವುದೇ ಫಲ ಸಿಗದೆ ಇದ್ದಾಗ ಕಲ್ಪಿತ ಕತೆಗಳನ್ನು ಕಟ್ಟಿ ಆರೋಪ ಪಟ್ಟಿ ಸಲ್ಲಿಸಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ದ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬೀದಿಗೆ ಇಳಿದು ಇದನ್ನು ಪ್ರತಿಭಟಿಸಲಿದ್ದಾರೆ. ಈ ಪ್ರತಿರೋಧಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು