1:56 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

Kalaburagi | ನಿರುದ್ಯೋಗ ಸಮಸ್ಯೆ ಬಗೆಹರಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

16/04/2025, 21:20

ಬೆಂಗಳೂರು(reporterkarnataka.com):ನಿರುದ್ಯೋಗ ಸಮಸ್ಯೆ ಬಗೆಹರಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಸಿಎಂ‌ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ಕಲಬುರಗಿಯ ಕೆಸಿಟಿ ಕಾಲೇಜು ಆವರಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉದ್ಯೋಗ ಮೇಳ ( ಯುವ ಸಮೃದ್ದಿ ಸಮ್ಮೇಳನ) ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುತ್ತೇವೆ ಎಂದು ವಾಗ್ದಾನ ಮಾಡಿದ್ದರು. ಈ ಹತ್ತು ವರ್ಷಗಳ ಅವರ ಅಧಿಕಾವಾಧಿಯಲ್ಲಿ ಇಪ್ಪತ್ತು ‌ಲಕ್ಷ ಉದ್ಯೋಗ ಕೊಡುವುದು ಅವರಿಗೆ ಆಗಿಲ್ಲ. ಇದು ಅವರೇ ಹೇಳಿದ ಮಾತಿದು. ಆದರೆ ಉದ್ಯೋಗ ನೀಡದೆ ಸುಳ್ಳು ಹೇಳಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ‌ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದೆವು. ಯುವ‌ನಿಧಿ ಯೋಜನೆಯಡಿಯಲ್ಲಿ ಪದವಿ ನಿರುದ್ಯೋಗಿ ಯುವಕರಿಗೆ ರೂ 2000 ಹಾಗೂ ಡಿಪ್ಲೋಮಾ ಪಾಸ್ ಆದವರಿಗೆ ರೂ 1500 ಗೌರವಧನ ( ಪ್ರತಿತಿಂಗಳು) ಎರಡು ವರ್ಷದ ಅವಧಿಯವರೆಗೆ ಕೊಡುತ್ತಿದ್ದೇವೆ.
ರಾಜ್ಯ ಸರ್ಕಾರ ಕೌಶಲ್ಯ ತರಬೇತಿ‌ ನೀಡಲು ಕೌಶಲ್ಯಾ ಅಭಿವೃದ್ದಿ‌ ಇಲಾಖೆ ತೆರೆದು ಅದರಡಿಯಲ್ಲಿ ಮಾರುಕಟ್ಟೆಯ ಬೇಡಿಕೆ ಅನ್ವಯ ತರಬೇತಿ ನೀಡಲಾಗುತ್ತಿದೆ. ಇಂದು ಉದ್ಯೋಗ ಮೇಳದಲ್ಲಿ ಉದ್ಯೋಗ ಸಿಗದಿರುವವರು ನಿರಾಸೆರಾಗಬೇಡಿ ನಿಮಗೆ ಮುಂದೊಂದು ದಿನ ಉದ್ಯೋಗ ಕೊಡಿಸುತ್ತೇವೆ.
Periodic Labour Force Survey ಪ್ರಕಾರ ದೇಶದಲ್ಲಿ ಡಿಗ್ರಿ ಪಾಸಾದವರಲ್ಲಿ 18.9% ಹಾಗೂ ಡಿಪ್ಲೋಮಾ‌ ಪಾಸಾದವರಲ್ಲಿ 17.1 ನಿರುದ್ಯೋಗ ಇದೆ. ನಮ್ಮ ರಾಜ್ಯದಲ್ಲಿ 2.5% ನಿರುದ್ಯೋಗ ಇದೆ. ಇದು ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇದು ಕಡಿಮೆ. ಇದಕ್ಕೆ ರಾಜ್ಯ ಸರ್ಕಾರ ಉದ್ಯೋಗ ಒದಗಿಸುವಲ್ಲಿ ಕೈಗೊಂಡ ಕ್ರಮಗಳೇ ಸಾಕ್ಷಿ.
FDA ಹೆಚ್ಚು ಹೆಚ್ಚು ಆದರೆ ನಿರುದ್ಯೋಗ ಸಮಸ್ಯೆ ಬಗೆಹರಿಯುತ್ತವೆ. ಕೆಕೆ ಭಾಗದ ಕೈಗಾರಿಕೆಗಳು ಬರಬೇಕೆಂದರೆ ಹೆಚ್ಚುವರಿ 60% incentive ಕೊಡಬೇಕು ಎಂದು ಖರ್ಗೆ ಅವರು ಹೇಳಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ಮಾಡಿ ಈ ಭಾಗದಲ್ಲಿ ಕೈಗಾರಿಕೆ ಸ್ಥಾಪನೆ ಹಾಗೂ ಅಭಿವೃದ್ದಿಗೆ ಕ್ರಮ ವಹಿಸುತ್ತಿದೆ ಎಂದು ಸಿಎಂ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಇಂದು ನೇಮಕವಾದ ಹತ್ತು ಜನ ಯುವಕರಿಗೆ ನೇಮಕಾತಿ ಪತ್ರ ವಿತರಿಸಿ ಅವರಿಗೆ ಶುಭ ಹಾರೈಸಿ ಭಾಗವಹಿಸಿದ ಕಂಪನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು