2:51 PM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್ ತೊಲಗಿಸಲು ಸಂಕಲ್ಪ

18/04/2025, 20:05

ಕಲಬುರ್ಗಿ(reporterkarnataka.com): ಬಿಜೆಪಿ ವತಿಯಿಂದ ರಾಜ್ಯ ಸರಕಾರದ ಬೆಲೆಯೇರಿಕೆ ವಿರುದ್ಧ ಕಲಬುರ್ಗಿಯಲ್ಲಿಂದು ಜನಾಕ್ರೋಶ ಯಾತ್ರೆ ನಡೆಸಲಾಯಿತು.


ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರ್ಭಟಿಸಿತು. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಆಕ್ರೋಶ ಹೊರಹಾಕುವ ಮೂಲಕ ಬಿಜೆಪಿಯ ಜನಪರ ಆಂದೋಲನವನ್ನು ಬೆಂಬಲಿಸಿದ ಪರಿ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಂಕಲ್ಪ ತೊಟ್ಟಿರುವುದಾಗಿ ಪಕ್ಷದ ನಾಯಕರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ,ಮಾಜಿ ಸಚಿವರಾದ ಬಿ. ಶ್ರೀರಾಮುಲು, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ , ರೈತ ಮೋರ್ಚಾ ರಾಜ್ಯಾಧ್ಯಕ್ಷ ಶ ಎ.ಎಸ್.ಪಾಟೀಲ್ ನಡಹಳ್ಳಿ, ಮಾಜಿ ಸಂಸದ ಉಮೆಶ್ ಜಾಧವ್, ಶಾಸಕ ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಶಶೀಲ ನಮೋಶಿ,ಡಿ.ಜಿ.ಪಾಟೀಲ್,ಮಾಜಿ ಶಾಸಕ ರಾಜ್ ಕುಮಾರ್ ಪಾಟೀಲ್ ತೆಲ್ಕೂರ್, ದತ್ತಾತ್ರೇಯ ಪಾಟೀಲ್ ರೇವೂರ್, ಸುಭಾಷ್ ಗುತ್ತೇದಾರ್, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಶರಣು ತಳ್ಳೀಕೇರಿ, ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಅಶೋಕ್ ಬಗಲಿ, ಮುಖಂಡರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ, ನಿತಿನ್ ಗುತ್ತೇದಾರ್, ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು