11:11 AM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ

18/04/2025, 23:03

ಮಂಗಳೂರು(reporterkarnataka.com): ಕೇಂದ್ರ ಸರಕಾರ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಆಯೋಜಿಸಿದ ಪ್ರತಿಭಟನಾ ಸಮಾವೇಶ ನಗರ ಹೊರವಲಯದ ಅಡ್ಯಾರ್ ಶಾ ಮೈದಾನದಲ್ಲಿ ನಡೆಯಿತು.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದರು.


ಪ್ರತಿಭಟನಾ ಸಮಾವೇಶಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ರಾಷ್ಟ್ರಧ್ವಜ ಹಿಡಿದು ಕೊಂಡು ಆಗಮಿಸಿದರು. ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಮತ್ತು ಮಂಗಳೂರು ಕಡೆಯಿಂದ ವಾಹನಗಳಲ್ಲಿ ಬಂದ ಪ್ರತಿಭಟನಾಕಾರರು ಒಂದು ಕಿಲೊಮೀಟರಿಗಿಂತಲೂ ದೂರ ವಾಹನಗಳನ್ನು ನಿಲ್ಲಿಸಿ ನಡೆದುಕೊಂಡು ಬಂದರು.‌
ಮಧ್ಯಾಹ್ನ 2 ಗಂಟೆಯಿಂದಲೇ ಅಡ್ಯಾರ್ ಕಣ್ಣೂರಿನತ್ತ ಜನರು ವಿವಿಧ ಕಡೆಗಳಿಂದ ಆಗಮಿಸಲಾರಂಭಿಸಿದ್ದು, ಹೆದ್ದಾರಿಯುದ್ದಕ್ಕೂ ವಾಹನ ಸಂಚಾರ ನಿಧಾನಗತಿಯಲ್ಲಿ ಸಂಚರಿಸುತ್ತಿತ್ತು. ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಮಧ್ಯಾಹ್ನದಿಂದ ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದ ಕಾರಣ ಮೊಬೈಲ್ ನೆಟ್‌ ವರ್ಕ್ ಬಹುತೇಕವಾಗಿ ಜಾಮ್ ಆಗಿದ್ದು, ಸಂಪರ್ಕ, ಸಂವಹನಕ್ಕೆ ಅಡ್ಡಿಯಾಯಿತು.
ರಾಷ್ಟ್ರಧ್ವಜ ಹಿಡಿದುಕೊಂಡು ಬಂದ ಪ್ರತಿಭಟನಾಕಾರರು ಮೈದಾನದ ಒಳಗೆ ಬಂದಾಗ ರಾಷ್ಟ್ರಧ್ವಜಗಳೇ ರಾರಾಜಿಸಿದವು. ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದವರು ಆಝಾದಿ ಘೋಷಣೆಗಳನ್ನು ಕೂಗುತ್ತಾ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಮಾಡದಂತೆ, ಉದ್ರೇಕಕಾರಿ ಘೋಷಣೆ ಕೂಗದಂತೆ, ಆಕ್ರೋಶಕ್ಕೆ ಒಳಗಾಗದಂತೆ ಸಂಘಟಕರು ಪದೇ ಪದೇ ಮನವಿ‌ ಮಾಡಿದರು.
ಶಾಂತಿಯುತ ಹೋರಾಟ ಮಾಡಬೇಕು, ಆವೇಶ, ಆಕ್ರೋಶವನ್ನು ಬದಿಗೊತ್ತಿ ‘ನಮ್ಮ ಸಂಸ್ಕೃತಿಯ ಪ್ರಕಾರ ವರ್ತಿಸಬೇಕು’ ಎಂದು ಮನವಿ‌ ಮಾಡಲಾಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು