7:20 AM Wednesday2 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಮಂಗಳೂರು ಬಿಷಪ್ ಅ। ವಂ। ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರಿಂದ ಈಸ್ಟರ್ ಹಬ್ಬದ ಶುಭ ಸಂದೇಶ

19/04/2025, 19:17

ಈಸ್ಟರ್ ಹಬ್ಬದ ಈ ಪವಿತ್ರ ಸಂದರ್ಭದಲ್ಲಿ, ಯೇಸು ಕ್ರಿಸ್ತರು ಮರಣವನ್ನು ಜಯಿಸಿ ಪುನರುತ್ಥಾನರಾದ ಸಂತೋಷವನ್ನು ನಾವು ಆಚರಿಸುತ್ತೇವೆ. ಶಿಲುಬೆಯ ಮೇಲೆ ಅವರ ತ್ಯಾಗ ಮತ್ತು ಪುನರುತ್ಥಾನವು ನಮಗೆ ಆಶಾಕಿರಣವನ್ನು, ಕ್ಷಮೆಯನ್ನು ಮತ್ತು ದೇವರ ಶಾಶ್ವತ ಪ್ರೀತಿಯನ್ನು ತೋರಿಸುತ್ತದೆ. ಕ್ರಿಸ್ತರು ಮ್ರತ್ಯುಂಜಯರಾದ ಆಚರಣೆಯ ಈ ಪವಿತ್ರ ಈಸ್ಟರ್ ಹಬ್ಬದ ನಿಮಿತ್ತ ನಿಮ್ಮೆಲ್ಲರಿಗೂ ಹಾರ್ದಿಕ ಶುಭಾಶಯಗಳು.
ಈಸ್ಟರ್ ಎಂದರೆ ವಿಜಯದ ಹಬ್ಬ – ಕೇಡಿನ ಮೇಲೆ ಸದ್ಗುಣಗಳ ಜಯ, ಅಸತ್ಯದ ಮೇಲೆ ಸತ್ಯದ ಜಯ, ಅಂಧಕಾರದ ಮೇಲೆ ಬೆಳಕಿನ ಜಯ, ಮರಣದ ಮೇಲೆ ಜೀವದ ಜಯ. ಯೇಸು ಕ್ರಿಸ್ತರು ತಮ್ಮ ಮರಣ ಮತ್ತು ಪುನರುತ್ಥಾನದ ಮೂಲಕ ನಮಗೆ ನವಜೀವನದ ದಾರಿ ತೋರಿಸಿದ್ದಾರೆ. ಅವರ ವಿಜಯದಲ್ಲಿ ನಾವು ಪಾಲುಗಾರರಾಗುವ ಮೂಲಕ, ನಮ್ಮ ಜೀವನದಲ್ಲಿ ಸತ್ಯ ಹಾಗು ಬೆಳಕಿನಲ್ಲಿ ನಡೆದು ಹೊಸ ಜೀವ ಪಡೆಯಬಹುದು.

ಈ ಈಸ್ಟರ್ ಸಮಯದಲ್ಲಿ ನಾವು ಸಹಾನುಭೂತಿ, ಕ್ಷಮೆ ಮತ್ತು ಪ್ರೀತಿಯ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಭರವಸೆ ಉಂಟುಮಾಡುವ ಸಂಕಲ್ಪವನ್ನು ಮಾಡೋಣ. ಕ್ರಿಸ್ತರು ತೋರಿಸಿದ ಮಾರ್ಗ ನಮ್ಮನ್ನು ನಡೆಸಲಿ. ನಾವು ಎಲ್ಲರಿಗೂ ದೇವರ ಪ್ರೀತಿಯ ಪ್ರತಿಬಿಂಬಗಳಾಗಿರೋಣ. ಒಗ್ಗಟ್ಟಿನಿಂದ, ದೇವರ ಕೃಪೆಯಲ್ಲಿ ನಾವು ಬೆಳೆಯುವ ಹಾಗು ನಮ್ಮ ಸುತ್ತಲಿನವರಿಗೆ ಶಾಂತಿ ಮತ್ತು ಸದ್ಭಾವನೆಯ ಸಂದೇಶವನ್ನು ಹಂಚಿಕೊಳ್ಳುವ.

ಇಂದು ಮತ್ತು ಸದಾ, ಕ್ರಿಸ್ತರ ಪುನರುತ್ಥಾನದ ಸಂತೋಷ ನಿಮ್ಮ ಕುಟುಂಬಗಳಿಗೆ ಆಶೀರ್ವಾದ ತರಲಿ ಎಂದು ಪ್ರಾರ್ಥಿಸುತ್ತೇನೆ.

ಅ। ವಂ। ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ, ಧರ್ಮಾಧ್ಯಕ್ಷರು, ಮಂಗಳೂರು

ಇತ್ತೀಚಿನ ಸುದ್ದಿ

ಜಾಹೀರಾತು