6:08 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ

19/04/2025, 20:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯ ಕುರಿತು ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ಮನಸ್ಸಿಗೆ ತುಂಬಾ ಖೇದ ಆಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಸೇರಿದ ಅಂಶವಾದ್ರೆ ಎಲ್ಲಾ ಕಡೆ ಇರಬೇಕಿತ್ತು. ವ್ಯವಸ್ಥೆಯಲ್ಲಿ ಈ ಸಮಾಜವನ್ನು ಅವಮಾನಿಸಬೇಕು ಎಂದು ಮಾಡಿದ್ದಾಗಿದೆ ಎಂದು ಘಟನೆ ಕುರಿತು ಶೃಂಗೇರಿಯಲ್ಲಿ ಪೇಜಾವರ ಶ್ರೀಗಳ ಹೇಳಿಕೆ ನೀಡಿದ್ದಾರೆ.
ಇಂತಹ ಕೃತ್ಯದಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ಅಂತಹ ಕೆಲಸ ಯಾರೂ ಮಾಡಬಾರದು, ನಾವು ಕಠಿಣವಾಗಿ ಖಂಡಿಸುತ್ತೇವೆ. ಮುಂದೆ ಇಂತಹ ಕೆಲಸ ಎಲ್ಲಿಯೂ ಆಗದಂತೆ ಸರ್ಕಾರ ಎಚ್ಚರ ವಹಿಸಬೇಕು. ಅಧಿಕಾರಿಗಳಿಗೆ ಕಟುವಾದ ಎಚ್ಚರಿಕೆ ನೀಡಬೇಕು. ಅಧಿಕಾರಿ ಮಾಡಿದ ತಪ್ಪಿಗೆ ಶಿಕ್ಷೆ ನೀಡಿದರೆ ಮುಂದೆ ಇಂತಹ ಘಟನೆ ನಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಘಟನೆಯನ್ನು ಕಠೋರವಾಗಿ ಖಂಡಿಸುತ್ತೇವೆ, ಸರ್ಕಾರ ತಕ್ಷಣ ತೀವ್ರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು
ಶೃಂಗೇರಿಯಲ್ಲಿ ಶಾಕಲ ಋಕ್ ಸಂಹಿತಾ ಯಾಗದಲ್ಲಿ ಭಾಗಿಯಾದ ಶ್ರೀಗಳು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು