4:11 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

Chikkamagaluru | ತರೀಕೆರೆಯ ಅಮೃತಾಪುರದಲ್ಲಿ ಚೀಟಿ ಹಣದ ವಿಚಾರವಾಗಿ ಗಲಾಟೆ: ಯುವಕನ ಬರ್ಬರ ಕೊಲೆ

21/04/2025, 16:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.

ಚೀಟಿ ಹಣದ ವಿಚಾರವಾಗಿ ಯುವಕನೊಬ್ಬನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ.
ಸಂಜು ನಾಯ್ಕ (26) ಮೃತ ದುರ್ದೈವಿ. ರುದ್ರೇಶ್ ನಾಯ್ಕ (26) ಕೊಲೆ ಆರೋಪಿಯಾಗಿದ್ದಾನೆ. ಕೊಲೆ‌ ತಪ್ಪಿಸಲು ಬಂದ ಅವಿನಾಶ್ ಗೆ ಹಲ್ಲಿನಿಂದ ಗಂಭೀರ ಗಾಯವಾಗುವಂತೆ ಕಚ್ಚಿ ರುದ್ರೇಶ್ ಗಾಯಗೊಳಿಸಿದ್ದಾನೆ.
ಅಮೃತಾಪುರ ಸೇವಾಲಾಲ್ ಸಂಘದಲ್ಲಿನ ಚೀಟಿ ವ್ಯವಹಾರ ನಡೆಸಲಾಗುತ್ತಿತ್ತು.
ಚೀಟಿ ಸರಿಯಾಗಿ ಕಟ್ಟದೇ ಸಂಜು ನಾಯ್ಕ ಗಲಾಟೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ಗ್ರಾಮಸ್ಥರು ಸಂಜು ನಾಯ್ಕ ನನ್ನು ನೀನು ಚೀಟಿಗೆ ಬೇಡ ವಾಪಸ್ ಕಳಿಸಿದ್ದರು. ಮನೆಗೆ ಬಂದ ಮೇಲೆ ಚೀಟಿ ಸದಸ್ಯರ ಜೊತೆ ಫೋನಿನಲ್ಲಿ ಜಗಳವಾಡಿದ್ದ. ನಂತರ ನೇರವಾಗಿ ಹೋಗಿ ಮತ್ತೆ ಜಗಳ ಮಾಡುವಾಗ ದೊಣ್ಣೆಯಲ್ಲಿ ಹೊಡೆದ ಚೀಟಿ ಸದಸ್ಯ ರುದ್ರೇಶ್ ಕೊಲೆ ಮಾಡಿದ್ದಾನೆ.
ತೀವ್ರ ರಕ್ತಸ್ರಾವದಿಂದ ಸಂಜು ನಾಯ್ಕ ಸ್ಥಳದಲ್ಲೇ ಸಾವು
ಕೊಲೆ ಆರೋಪಿ ರುದ್ರೇಶ್ ನಾಯ್ಕ ಪೊಲೀಸರ ವಶಕ್ಕೆಪಡೆದಿದ್ದಾರೆ.
ತರೀಕೆರೆ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು