9:03 PM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು ಮಂದಿ ಸಾವು; ಹಲವರಿಗೆ ಗಾಯ

22/04/2025, 20:28

ಶ್ರೀನಗರ(reporterkarnataka.com): ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಶಿವಮೊಗ್ಗದ ಉದ್ಯಮಿ ಸೇರಿದಂತೆ 5ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಉಗ್ರರ ದಾಳಿಗೆ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ
ಮಂಜುನಾಥ್ ಎಂಬವರು ಸಾವನ್ನಪ್ಪಿದ್ದಾರೆ. ಮಂಜುನಾಥ್ ಅವರು
ಕುಟುಂಬ ಸಮೇತರಾಗಿ ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ಮಧ್ಯಾಹ್ನ ಉಗ್ರರ ದಾಳಿ ನಡೆಸಿದ್ದರು.
ಪಹಲ್ಗಾಮ್‌ನ ಬೈಸರನ್ ಕಾಡು ಪ್ರದೇಶದಲ್ಲಿ ಟ್ರಕ್ಕಿಂಗ್ ಹೋಗುತ್ತಿದ್ದ ಮಹಿಳಾ ಪ್ರವಾಸಿಗರೊಬ್ಬರು ಪೊಲೀಸರಿಗೆ ಕರೆ ಮಾಡಿ ಭಯೋತ್ಪಾದಕರಿಂದ ದಾಳಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಚಾರಣಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ಮಾಡಿದ್ದರು ಎಂದು ಅವರು ಮಾಹಿತಿ ನೀಡಿದ್ದರು. ಒಂದು ವರ್ಷದ ನಂತರ ನಡೆದ ಅತ್ಯಂತ ಭೀಕರ ದಾಳಿಯಾಗಿದೆ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಯಲ್ಲಿ ಹಲವಾರು ಪ್ರವಾಸಿಗರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ತಿಳಿದು ಬಂದಿದೆ.
ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದು, ಐದಕ್ಕೂ ಹೆಚ್ಚು ಜನರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆದರೆ, ಇದುವರೆಗೆ ಕೇವಲ ಇಬ್ಬರ ಸಾವಿನ ಬಗ್ಗೆ ಖಚಿತ ಮಾಹಿತಿ ದೊರೆತಿದೆ. ಘಟನೆ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಪ್ರಧಾನಿ ಮೋದಿ ಅವರು ಗೃಹ ಸಚಿವ ಅಮಿತ್‌ ಶಾ ಅವರ ಜೊತೆ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ತಕ್ಷಣ
ಕಾಶ್ಮೀರಕ್ಕೆ ತೆರಳಿದ್ದಾರೆ. ಈ ಮಧ್ಯೆ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪ್ರವಾಹ ಪೀಡಿತ ಸ್ಥಳಗಳ ಪರಿಶೀಲನೆಗೆ ತೆರಳಿದ್ದ ಜಮ್ಮು-ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಶ್ರೀನಗರಕ್ಕೆ ವಾಪಸ್‌ ಆಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು