3:58 AM Thursday3 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

22/04/2025, 20:38

ಮಂಡ್ಯ(reporterkarnataka.com): ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು ನೀಡಿದ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲೆಯ ನಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಮೀಕ್ಷೆ ವರದಿ ಬಗ್ಗೆ ಪಕ್ಷದ ನಾಯಕರಿಂದ ಅಪಸ್ವರ ಎದ್ದಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರದಿಯಲ್ಲಿ ಯಾವುದೇ ನ್ಯೂನ್ಯತೆಗಳಿದ್ದರೆ ಸರಿಪಡಿಸಲಾಗುವುದು. ವರದಿ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಂತೆ ಸಚಿವರಿಗೆ ತಿಳಿಸಲಾಗಿದ್ದು, ಅವುಗಳನ್ನು ಪರಿಶೀಲಿಸಿ ನಂತರ ಸೂಕ್ತ ತೀರ್ಮಾನವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು ಎಂದರು.
1984ರಲ್ಲಿ ನಡೆದ ಸಮೀಕ್ಷೆಯಲ್ಲಿದ್ದ ಮುಸ್ಲಿಮರ ಸಂಖ್ಯೆ ಈಗ ವರದಿಯಲ್ಲಿ ಶೇ.90ರಷ್ಟು ಹೆಚ್ಚಾಗಿದ್ದು, ಲಿಂಗಾಯತರ ಸಂಖ್ಯೆ ಕೇವಲ ಶೇ.8ರಷ್ಟು ಜಾಸ್ತಿಯಾಗಿರುವುದಾಗಿ ಬಿಜೆಪಿಯವರು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಕಾಂತರಾಜು ಆಯೋಗದ ಅಂಕಿಅಂಶಗಳ ಆಧಾರದ ಮೇಲೆ ಜಯಪ್ರಕಾಶ್ ಹೆಗಡೆಯವರು ಶಿಫಾರಸ್ಸು ಮಾಡಿದ್ದಾರೆ ಎಂದರು.
*ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶವಿಲ್ಲ:*
ವಿಂಗ್ ಕಮಾಂಡರ್ ನೊಬ್ಬ ಕನ್ನಡಿಗರ ಮೇಲೆ ಹಲ್ಲೆ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪೆಸೆಗಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ. ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನಕ್ಕೆ ಸರ್ಕಾರದ ವಿರೋಧವಿದೆ. ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಹಾಗೂ ಇಂಗ್ಲಿಷ್ ಬಳಕೆಗೆ ಪೂರವಾದ ದ್ವಿಭಾಷಾ ನೀತಿ ಜಾರಿಯಲ್ಲಿದೆ. ರಾಜ್ಯದಲ್ಲಿ ತ್ರಿಭಾಷಾ ಸೂತ್ರವಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು