11:46 PM Monday22 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ: ಭಾರಿ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಶ

23/04/2025, 11:38

ಶ್ರೀನಗರ(reporterkarnataka.com): ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ 25ಕ್ಕೂ ಅಧಿಕ ಪ್ರವಾಸಿಗರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ ಈಗಾಗಲೇ ಆರಂಭವಾಗಿದ್ದು, ಇಬ್ಬರು ಉಗ್ರಗಾಮಿಗಳನ್ನು ಸದೆಬಡಿಯಲಾಗಿದೆ. ಉಗ್ರರಿಂದ ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡು ವಶಪಡಿಸಲಾಗಿದೆ.
ಇನ್ನಷ್ಟು ಉಗ್ರಗಾಮಿಗಳು ಭಾರತದ
ಗಡಿಯೊಳಗೆ ನುಸುಳುವ ಸಂಚನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.
ಉಗ್ರಗಾಮಿಗಳು ನಿನ್ನೆ ನಡೆಸಿದ ದಾಳಿಗೆ ಶಿವಮೊಗ್ಗದ ಉದ್ಯಮಿ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಉಗ್ರರ ದಾಳಿಗೆ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ರಾವ್ ಎಂಬವರು ಸಾವನ್ನಪ್ಪಿದ್ದರು. ಮಂಜುನಾಥ್ ಅವರು ಕುಟುಂಬ ಸಮೇತರಾಗಿ ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಕಾಶ್ಮೀರದ
ಪಹಲ್ಗಾಮ್‌ನಲ್ಲಿ ನಿನ್ನೆ ಮಧ್ಯಾಹ್ನ ಉಗ್ರರ ದಾಳಿ ನಡೆಸಿದ್ದರು.
ಪಹಲ್ಗಾಮ್‌ನ ಬೈಸರನ್ ಕಾಡು ಪ್ರದೇಶದಲ್ಲಿ ಟ್ರಕ್ಕಿಂಗ್ ಹೋಗುತ್ತಿದ್ದ ಮಹಿಳಾ ಪ್ರವಾಸಿಗರೊಬ್ಬರು ಪೊಲೀಸರಿಗೆ ಕರೆ ಮಾಡಿ ಭಯೋತ್ಪಾದಕರಿಂದ ದಾಳಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು